ಎನ್. ಶ್ರೀನಿವಾಸ್
ಭದ್ರಾವತಿ: ನಗರದ ಸಿದ್ದಾಪುರ ನಿವಾಸಿ, ಛಲವಾದಿ ಸಮಾಜದ ಮುಖಂಡ ಎನ್. ಶ್ರೀನಿವಾಸ್(೬೩) ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಪತ್ನಿ, ಪುತ್ರ ಹಾಗು ಪುತ್ರಿ ಇದ್ದಾರೆ. ಶ್ರೀನಿವಾಸ್ ಮೈನ್ಸ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಇವರ ಅಂತ್ಯಕ್ರಿಯೆ ಬುಧವಾರ ಸಿದ್ದಾಪುರ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ.
ಶ್ರೀನಿವಾಸ್‌ರವರು ಪ್ರಸ್ತುತ ಜಿಲ್ಲಾ ಛಲವಾದಿ ಸಮಾಜದ ಗೌರವಾಧ್ಯಕ್ಷರಾಗಿದ್ದರು. ಅಲ್ಲದೆ ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಈ ಹಿಂದೆ ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಇವರ ನೇತೃತ್ವದಲ್ಲಿ ನಗರದಲ್ಲಿ ಜಿಲ್ಲಾಮಟ್ಟದ ಹಾಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಛಲವಾದಿಗಳ ಸಮ್ಮೇಳನ ನಡೆಸಲಾಗಿತ್ತು. ಇವರ ನಿಧನಕ್ಕೆ ತಾಲೂಕು ಛಲವಾದಿಗಳ ಮಹಾಸಭಾ ಸೇರಿದಂತೆ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
No comments:
Post a Comment