ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ವತಿಯಿಂದ ಭದ್ರಾವತಿ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್‌ರವರಿಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭದ್ರಾವತಿ: ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ವತಿಯಿಂದ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್‌ರವರಿಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಶಿವಕುಮಾರ್‌ರವರ ಸಮಾಜ ಸೇವೆಯನ್ನು ಗುರುತಿಸಿ ಸಂಘಟನೆ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಶಿವಕುಮಾರ್‌ರವರು ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದ ಟ್ರಸ್ಟಿಯಾಗಿದ್ದು, ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ತಾಲೂಕು ಆಡಳಿತ ವತಿಯಿಂದ ಕಳೆದ ವರ್ಷ ಗಣರಾಜ್ಯೋತ್ಸವದಂದು ಸನ್ಮಾನಿಸಿ ಗೌರವಿಸಲಾಗಿತ್ತು.
ದಾಸೋಹ ದಿನ ಕಾರ್ಯಕ್ರಮದಲ್ಲಿ ಬೇಬಿ ಬೆಟ್ಟ ಶ್ರೀ ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ, ಹುಲ್ಲಿನಬೀದಿ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಮತ್ತು ಹಲಸಹಳ್ಳಿ ಕಲ್ಯಾಣ ಬಸವೇಶ್ವರ ಮಠದ ಶ್ರೀ ಓಂಕಾರೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಹೂಟಗಳ್ಳಿ ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ನಾಗರಾಜ ವಿ. ಬೈರಿ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಎಸ್. ಬಸವರಾಜು, ಎಂ. ಶಿವಕುಮಾರ್, ಎಂ.ಎಸ್ ಮಂಜುನಾಥ್, ಸಿ. ನಂಬಿರಾಜ್, ಕರಾಟೆ ಇಂಟರ್ ಏಷಿಯನ್ ನ್ಯಾಷನಲ್ ಕಲ್ಚರ್ ಯೂನಿವರ್ಸಿಟಿಯ ಎ.ಪಿ ಶ್ರೀನಾಥ್, ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್, ಅಪೇಕ್ಷ ನೃತ್ಯ ಕಲಾವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ, ಮೈಸೂರಿನ ಅಲಯನ್ಸ್ ಕ್ಲಬ್ ಪಿಆರ್‌ಓ ಎನ್. ಬೆಟ್ಟೇಗೌಡ, ಜ್ಞಾನ ದಾಸೋಹ ಟ್ರಸ್ಟ್ ಅಧ್ಯಕ್ಷ ಸಿ.ಎನ್ ಸದಾಶಿವ, ಕೆಂಗೇರಿಯ ಸಮಾಜ ಸೇವಕ ಪಾಂಡುರಂಗ, ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಅಪೇಕ್ಷ ಮಂಜುನಾಥ್, ಗೌರವಾಧ್ಯಕ್ಷ ನ. ಗಂಗಾಧರಪ್ಪ, ಉಪಾಧ್ಯಕ್ಷ ಶಿವಕುಮಾರ ಪಾಟೀಲ್, ಉಪಾಧ್ಯಕ್ಷ ಶಿವಕುಮಾರ್ ಪಾಟೀಲ್ ತೇಗಂಪೂರ, ಪ್ರಧಾನ ಸಂಘಟಕ ಮೆಣಸಿಗೆರೆ ಶಿವಲಿಂಗಪ್ಪ, ಸಂಚಾಲಕ ಮಾರುತಿ ಎಸ್. ಬೀದರ್, ಮಹಿಳಾ ಅಧ್ಯಕ್ಷೆ ಸ್ವಾತಿ ಬಸಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಕೆ ರಾಮಸ್ವಾಮಿ, ಆರ್.ಎಸ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶಿವಕುಮಾರ್‌ರವರನ್ನು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment