ಶಿವಮೊಗ್ಗದಲ್ಲಿ ಜ.೩೧ ರಿಂದ ಫೆ.೨ರ ತನಕ ನಡೆಯುವ ೪೪ನೇ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಭದ್ರಾವತಿ ನಗರದ ಕಾರ್ಯಕರ್ತರು ಸಮ್ಮೇಳನಕ್ಕೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದಾರೆ.
ಭದ್ರಾವತಿ: ಶಿವಮೊಗ್ಗದಲ್ಲಿ ಜ.೩೧ ರಿಂದ ಫೆ.೨ರ ತನಕ ನಡೆಯುವ ೪೪ನೇ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ನಗರದ ಕಾರ್ಯಕರ್ತರು ಸಮ್ಮೇಳನಕ್ಕೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದಾರೆ.
ಸಮ್ಮೇಳನದ ಸ್ವಾಗತ ಸಮಿತಿ ಸದಸ್ಯರಾದ ಬಿ. ದಿವಾಕರಶೆಟ್ಟಿಯವರ ಮೂಲಕ ರಾಜ್ಯ ಸಮ್ಮೇಳನಕ್ಕೆ ದಿನಸಿ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಯಿತು. ದಿವಾಕರಶೆಟ್ಟಿಯವರು ಮಾತನಾಡಿ, ಜಗತ್ತಿನ ಅತಿ ದೊಡ್ಡ ಪ್ರಭಾವಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಮ್ಮೇಳನ ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಈ ಸಮ್ಮೇಳನ ಯಶಸ್ವಿಯಾಗಲು ಜಿಲ್ಲೆಯ ಎಲ್ಲಾ ನಾಗರೀಕರು ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್‌ರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣದ ಧ್ಯೇಯ ಹೊಂದಿರುವ ಎಬಿವಿಪಿಗೆ ಸಮಾಜದ ಎಲ್ಲರ ಸಹಕಾರ ಹೆಚ್ಚಿನದ್ದಾಗಿದೆ ಎಂದರು. ಎಬಿವಿಪಿ ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
No comments:
Post a Comment