ನಗದು ಪ್ರೋತ್ಸಾಹ, ಉಚಿತ ಕಾರು ಚಾಲನಾ ತರಬೇತಿ
ಜಾನ್ ಬೆನ್ನಿ
ಭದ್ರಾವತಿ: ನಗರದ ಉಂಬ್ಳೆಬೈಲು ರಸ್ತೆಯ ವಿಜಯ್ ಡ್ರೈವಿಂಗ್ ಸ್ಕೂಲ್ ವತಿಯಿಂದ ಚಾಲನಾ ತರಬೇತಿ ಜೊತೆಗೆ ಹಲವು ವಿಭಿನ್ನ ರೀತಿಯ ಸಾಮಾಜಿಕ ಕಾರ್ಯಗಳನ್ನು ಸಹ ಕೈಗೊಳ್ಳಲಾಗುತ್ತಿದೆ. ಇದೀಗ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಬಾರಿ ವಿಧಾನಕ್ಷೇತ್ರದ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದ ಓರ್ವ ವಿದ್ಯಾರ್ಥಿಗೆ ೧ ಸಾವಿರ ರು. ನಗದು ಪ್ರೋತ್ಸಾಹ ಧನ ನೀಡಲಾಗುವುದು. ಅಲ್ಲದೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೬೨೫ಕ್ಕೆ ೬೨೫ ಅಂಕಗಳನ್ನು ಪಡೆದ ಓರ್ವ ವಿದ್ಯಾರ್ಥಿಗೆ ೨೦ ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುವುದು. ಒಂದು ವೇಳೆ ಒಂದಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ೬೨೫ಕ್ಕೆ ೬೨೫ ಅಂಕಗಳನ್ನು ಪಡೆದುಕೊಂಡಲ್ಲಿ ೨೦ ಸಾವಿರ ರು. ಹಣದಲ್ಲಿ ಹಂಚಿಕೆ ಮಾಡಿ ನೀಡಲಾಗುವುದು. ಅಲ್ಲದೆ ವಿದ್ಯಾರ್ಥಿಗೆ ಅಥವಾ ಆ ವಿದ್ಯಾರ್ಥಿಯ ಕುಟುಂಬದಲ್ಲಿನ ಓರ್ವ ಸದಸ್ಯರಿಗೆ ಮಾತ್ರ ಉಚಿತವಾಗಿ ಕಾರು ಚಾಲನಾ ತರಬೇತಿ ನೀಡಲಾಗುವುದು. ಶಾಲೆಯ ವಾರ್ಷಿಕೋತ್ಸವ ದಿನದಂದು ಪ್ರೋತ್ಸಾಹ ಧನ ನೀಡಲಾಗುವುದು ಎಂದು ವಿಜಯ್ ಡ್ರೈವಿಂಗ್ ಸ್ಕೂಲ್ ಮಾಲೀಕ, ವಿಧಾನಸಭಾ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಜಾನ್ ಬೆನ್ನಿ ತಿಳಿಸಿದ್ದಾರೆ.
No comments:
Post a Comment