ಭದ್ರಾವತಿ ತಾಲೂಕಿನ ಗೊಲ್ಲ-ಯಾದವ ಸಂಘದ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ರಸ್ತೆ, ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದ ಮೊದಲ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆ ಜರುಗಿದವು. ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.
ಭದ್ರಾವತಿ : ತಾಲೂಕಿನ ಗೊಲ್ಲ-ಯಾದವ ಸಂಘದ ವತಿಯಿಂದ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ರಸ್ತೆ, ಮೆಸ್ ಸರ್ಕಲ್ ಶ್ರೀ ಕೃಷ್ಣ ದೇವಸ್ಥಾನದ ಮೊದಲ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆ ಜರುಗಿದವು.
ದೇವತಾ ಪ್ರಾರ್ಥನೆ, ಗುರು ಪ್ರಾರ್ಥನೆ, ಗಣಪತಿ ಪೂಜೆ, ಮಹಾ ಸಂಕಲ್ಪ, ಸ್ವಸ್ತಿ ಪುಣ್ಯಾಹವಾಚನ, ಪಂಚಗವ್ಯ ಪ್ರೋಕ್ಷಣೆ, ಆಚಾರ್ಯಾದಿ ಋತ್ವಿಗ್ವರಣ, ಕಳಶ ಪೂಜೆ, ಗಣಪತಿ ಮಂಡಲ ಆರಾಧನೆ, ನವಗ್ರಹ ಪೂಜೆ, ಕಲಾತತ್ವ ಕಳಶ ಪೂಜೆ, ಮಂಡಲ ಪೂಜೆ, ಅಗ್ನಿ ಪ್ರತಿಷ್ಠೆ, ಗಣಪತಿ ಹೋಮ, ನವಗ್ರಹ ಹೋಮ, ಪರಿವಾರ ದೇವತಾ ಹೋಮ, ಕಲಾತತ್ವ ಹೋಮ, ಪೂರ್ಣಾಹುತಿ, ಕಳಶಾಭಿಷೇಕ, ಅಲಂಕಾರ, ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಹಾಗು ರಾಜಬೀದಿ ಉತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಪ್ರಧಾನ ಅರ್ಚಕ ಗುರುಮೂರ್ತಿಯವರ ಸಾರಥ್ಯದಲ್ಲಿ ನೆರವೇರಿದವು.
ಗೊಲ್ಲ-ಯಾದವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗು ಗೊಲ್ಲ-ಯಾದವ ಸಮಾಜದವರು ಮತ್ತು ಗಣ್ಯರು, ದಾನಿಗಳು, ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
No comments:
Post a Comment