ಎನ್‌ಎಸ್‌ಯುಐ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ರವರ ಜನ್ಮದಿನದ ಅಂಗವಾಗಿ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಣೆ ನಡೆಯಿತು.
ಭದ್ರಾವತಿ : ಸಹೋದರಿ, ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಜನರ ಸೇವೆ ಮಾಡಲು ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ ಎಂದು ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಹೇಳಿದರು.
ಅವರು ಎನ್‌ಎಸ್‌ಯುಐ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ರವರ ಜನ್ಮದಿನದ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಧಿಕಾರ ಇರಲಿ, ಇಲ್ಲದಿರಲಿ ಜನರ ಬಗ್ಗೆ ಕಾಳಜಿ ಹೊಂದುವ ಮೂಲಕ ನಿರಂತರವಾಗಿ ಅವರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ರವರಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಧಿಕಾರ ಲಭಿಸುವ ಮೂಲಕ ಅವರು ಜನಸಾಮಾನ್ಯರ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಮಾಡುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಹಿರಿಯ ಪತ್ರಕರ್ತ ಕಣ್ಣಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಮುಸ್ವೀರ್ ಬಾಷಾ, ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ಮಹಮ್ಮದ್, ಸಲಹೆಗಾರ ಶ್ರೀನಿವಾಸ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್, ಮುಖಂಡರಾದ ಬಸವಂತಪ್ಪ, ಮಲ್ಲಿಕಾರ್ಜುನ್, ದಿಲ್ದಾರ್, ಸುರೇಶ್ ವರ್ಮ, ಗಂಗಾಧರ್, ಅಮೀರ್‌ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment