ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯದಲ್ಲೇ ಏಕೈಕ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.
ಭದ್ರಾವತಿ : ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯದಲ್ಲೇ ಏಕೈಕ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಉದ್ಘಾಟಿಸಿದರು.
ವಿದ್ಯಾಸಂಸ್ಥೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ಸಂಸ್ಥೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಮತ್ತು ಸಂಸ್ಥಾಪಕರಾದ ಬಿ.ಎಲ್ ರಂಗಸ್ವಾಮಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಬಿ. ಇಡಿ ವಿಭಾಗಗಳಲ್ಲಿ ಅತಿಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.
ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್ ಷಡಾಕ್ಷರಿ,ಬೆಂಗಳೂರು ಹಾಗೂ ಪ್ರಧಾನ ಪೋಷಕರು, ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಭದ್ರಾವತಿ ಇವರು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು(ಆಡಳಿತ) ಎಸ್.ಆರ್ ಮಂಜುನಾಥ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಎಲ್ ಷಡಾಕ್ಷರಿ, ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ, ಬಿ.ಇಡಿ ವಿಭಾಗದ ಪ್ರಾಂಶುಪಾಲ ಡಾ.ಎಸ್.ಪಿ ರಾಕೇಶ್ ಮತ್ತು ವಿದ್ಯಾಸಂಸ್ಥೆ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು.
ವಿದ್ಯಾ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಸ್.ಕೆ ಮೋಹನ್ ಸ್ವಾಗತಿಸಿ, ನಿರ್ದೇಶಕ ಬಿ. ಚೆನ್ನಯ್ಯ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಕೆ.ಆರ್ ಪ್ರಶಾಂತ್ ರವರು ವಂದಿಸಿದರು.
No comments:
Post a Comment