ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು(ಗ್ರಾಮ ಲೆಕ್ಕಿಗರು) ಸೋಮವಾರದಿಂದ ಭದ್ರಾವತಿ ತಾಲೂಕು ಕಚೇರಿ ಮುಂಭಾಗ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು(ಗ್ರಾಮ ಲೆಕ್ಕಿಗರು) ಸೋಮವಾರದಿಂದ ತಾಲೂಕು ಕಚೇರಿ ಮುಂಭಾಗ ೨ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಕಂದಾಯ ಇಲಾಖೆಯ ಮೂಲ ಆಧಾರ ಸ್ತಂಭವಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು, ಸೇವಾ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಮುಷ್ಕರ ನಡೆಸಲಾಗುತ್ತಿದ್ದು ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. .
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿಕುಮಾರ್ ಮುಷ್ಕರದ ನೇತೃತ್ವ ವಹಿಸಿದ್ದರು. ತಾಲೂಕು ಸಂಘದ ಪದಾಧಿಕಾರಿಗಳಾದ ಶಿವಣ್ಣ, ರಾಜೇಶ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment