ಭದ್ರಾವತಿ ನಗರದ ರಂಗಭೂಮಿ ಹಾಗೂ ಚಲನಚಿತ್ರ ಕಿರುತೆರೆ ನಟ ವೈ.ಕೆ ಹನುಮಂತಯ್ಯರವರ ಕಲಾ ಸೇವೆಯನ್ನು ಪರಿಗಣಿಸಿ ಹೊಸೂರಿನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಭದ್ರಾವತಿ: ನಗರದ ರಂಗಭೂಮಿ ಹಾಗೂ ಚಲನಚಿತ್ರ ಕಿರುತೆರೆ ನಟ ವೈ.ಕೆ ಹನುಮಂತಯ್ಯರವರ ಕಲಾ ಸೇವೆಯನ್ನು ಪರಿಗಣಿಸಿ ಹೊಸೂರಿನ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಕ್ಕರೆ ಘಟಕದಲ್ಲಿ ಸುಮಾರು ೨೯ ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ವೈ.ಕೆ ಹನುಮಂತಯ್ಯರವರು ಸುಮಾರು ೫ ದಶಕಗಳಿಂದ ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದು, ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಹಾಗು ಜಾನಪದ ಸೇರಿದಂತೆ ಒಟ್ಟು ೬೦ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರ ಅಭಿನಯದ ನಾಟಕಗಳು ಸುಮಾರು ೧೮೦ ಬಾರಿ ಪ್ರದರ್ಶನಗೊಂಡಿವೆ. ಅಲ್ಲದೆ ಹನುಮಂತಯ್ಯರವರು ನೃತ್ಯ ಕಲಾವಿದರಾಗಿದ್ದು, ಎಲ್ಲಾ ಪ್ರಕಾರದ ನೃತ್ಯಗಳನ್ನು ಪ್ರದರ್ಶಿಸಿದ್ದಾರೆ.
೨೫೦ಕ್ಕೂ ಹೆಚ್ಚು ಬೀದಿ ನಾಟಕಗಳಲ್ಲಿ ಅಭಿನಯಿಸಿದ್ದು, ಚಲನಚಿತ್ರ ಕಿರುತೆರೆ ನಟರಾಗಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಜಿಲ್ಲಾ ಹಾಗು ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ. ಇವರ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment