ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಸೈಯದ್ ರಿಯಾಜ್‌ರನ್ನು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ವತಿಯಿಂದ ಶುಕ್ರವಾರ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ : ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಸೈಯದ್ ರಿಯಾಜ್‌ರನ್ನು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ವತಿಯಿಂದ ಶುಕ್ರವಾರ ಸನ್ಮಾನಿಸಿ ಅಭಿನಂದಿಸಲಾಯಿತು.
ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ ನೇತೃತ್ವದಲ್ಲಿ ಸೈಯದ್ ರಿಯಾಜ್‌ರನ್ನು ಸನ್ಮಾನಿಸುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಉತ್ತಮ ಸೇವೆ ಸಲ್ಲಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಧಿಕಾರ ಲಭಿಸುವಂತಾಗಲಿ ಎಂದು ಅಭಿನಂದಿಸಲಾಯಿತು.
ಉಪಾಧ್ಯಕ್ಷ ಜಿ. ಜಯಕಾಂತ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಬೋಸ್ಲೆ, ಮುಖಂಡರಾದ ಕಾಂಗ್ರೆಸ್ ಕಲ್ಪನಳ್ಳಿ ಪ್ರವೀಣ್ ನಾಯ್ಕ, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ರೇಷ್ಮಾ ಬಾನು, ಜಯಶೀಲ, ಅನುಸೂಯಮ್ಮ ಮತ್ತು ನೇತ್ರಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment