ಭದ್ರಾವತಿ ಲಯನ್ಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಾಂತೀಯ ಅಧ್ಯಕ್ಷ ಬಿ.ಎಸ್ ಮಹೇಶ್ ಕುಮಾರ್ ಮಾತನಾಡಿದರು.
ಭದ್ರಾವತಿ : ಲಯನ್ಸ್ ಇಂಟರ್‌ನ್ಯಾಷನಲ್ ವಲಯ-೭, ಜಿಲ್ಲೆ-೩೧೭ಸಿ ಪ್ರಾಂತೀಯ ಸಮ್ಮೇಳನ `ಸ್ನೇಹ ಚಂದ್ರಮ' ಫೆ.೮ರಂದು ಮಧ್ಯಾಹ್ನ ೩ ಗಂಟೆಗೆ ನಗರದ ನ್ಯೂಟೌನ್ ಲಯನ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂತೀಯ ಅಧ್ಯಕ್ಷ ಬಿ.ಎಸ್ ಮಹೇಶ್ ಕುಮಾರ್ ಹೇಳಿದರು.
ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ನಮ್ಮ ಪ್ರಾಂತೀಯ ವ್ಯಾಪ್ತಿಯಲ್ಲಿ ೪ ವಲಯಗಳು ಬರಲಿದ್ದು, ಪ್ರಾಂತೀಯ ಅಧ್ಯಕ್ಷರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಸಾಮಾಜಿಕವಾಗಿ ನಮ್ಮಲ್ಲಿನ ಬದ್ಧತೆ, ಸೇವಾ ಮನೋಭಾವನೆ ಇಲ್ಲಿ ಬಹುಮುಖ್ಯವಾಗಿವೆ. ನಮ್ಮನ್ನು ಹೆಚ್ಚಾಗಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
`ಸ್ನೇಹ ಚಂದ್ರಮ' ಪ್ರಾಂತೀಯ ಸಮ್ಮೇಳನದಲ್ಲಿ ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಕ್ಲಬ್‌ನ ಪ್ರಮುಖರು ಪಾಲ್ಗೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಕೆ ಸಂಗಮೇಶ್ವರ್, ಕುವೆಂಪು ವಿ.ವಿ ಕುಲಪತಿ ಡಾ. ಶರತ್ ಅನಂತಮೂರ್ತಿ, ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಮಾಜಿ ನಿರ್ದೇಶಕ ಡಾ. ಕೆ.ಪಿ ಪುತ್ತುರಾಯ, ವಿಡಿಜಿ-೧ ಸಪ್ನ ಸುರೇಶ್, ವಿಡಿಜಿ-೨ ರಾಜೀವ್ ಕೊಟ್ಯಾನ್ ಮತ್ತು ವಲಯ ಸಲಹೆಗಾರ ಬಿ. ದಿವಾಕರ ಶೆಟ್ಟಿ ಸೇರಿದಂತೆ ಇನ್ನಿತರರು ಆಗಮಿಸಲಿದ್ದಾರೆ ಎಂದರು.
ವಲಯ ಕಾರ್ಯದರ್ಶಿ ಪರಮೇಶ್ವರಪ್ಪ, ಸಮ್ಮೇಳನ ಅಧ್ಯಕ್ಷ ಜಿ.ಡಿ ಪ್ರಭುದೇವ, ಸಂಚಾಲಕ ಎ.ಎನ್ ಕಾರ್ತಿಕ್, ಕಾರ್ಯದರ್ಶಿ ಹೆಬ್ಬಂಡಿ ನಾಗರಾಜ್, ಖಜಾಂಚಿ ಕೆ.ಎಚ್ ರವಿಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಮೂರ್ತಿ ನಾಯ್ಡು, ಕಾರ್ಯದರ್ಶಿ ಎನ್. ಶಿವಕುಮಾರ್ ಹಾಗು ಖಜಾಂಚಿ ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
No comments:
Post a Comment