Friday, February 28, 2025

ದೇವಸ್ಥಾನ ಆಡಳಿತ ಮಂಡಳಿಯಿಂದ ಶಾರದ ಅಪ್ಪಾಜಿಗೆ ಸನ್ಮಾನ

ಭದ್ರಾವತಿ ಅಪ್ಪರ್‌ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಜಾತ್ಯತೀತ ಜನಾತದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ: ಅಪ್ಪರ್‌ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಜಾತ್ಯತೀತ ಜನಾತದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಮಹಾಶಿವರಾತ್ರಿ ಅಂಗವಾಗಿ ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದ ಶಾರದ ಅಪ್ಪಾಜಿಯವರನ್ನು ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸ್ಥಳೀಯ ಮುಖಂಡರು, ಶಂಕರ್‌ನಾಗ್ ಆಟೋ ನಿಲ್ದಾಣದ ಅಧ್ಯಕ್ಷರು, ಪದಾಧಿಕಾರಿಗಳು, ಆಟೋ ಚಾಲಕರು, ಉಮಾ ಭಜನಾ ಮಂಡಳಿ ಸದಸ್ಯರು ಸೇರಿದಂತೆ ಇನ್ನಿತರರು ಸನ್ಮಾನಿಸಿ ಗೌರವಿಸಿದರು. 
    ಶಾರದ ಅಪ್ಪಾಜಿ ಮಾತನಾಡಿ, ಮಾಜಿ ಶಾಸಕರಾದ ದಿವಂಗತ ಎಂ.ಜೆ ಅಪ್ಪಾಜಿಯವರು ಕ್ಷೇತ್ರದ ಜನತೆಗೆ ನೀಡಿರುವ ಕೊಡುಗೆ ಅಪಾರವಾಗಿದೆ. ಅವರ ಮೇಲಿನ ಅಭಿಮಾನ ಎಂದು ಮರೆಯಲು ಸಾಧ್ಯವಿಲ್ಲ. ದೇವಸ್ಥಾನ ಸಮಿತಿಗೆ ಹಾಗು ಸ್ಥಳೀಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. 
    ಪ್ರಮುಖರಾದ ಟಿ. ಚಂದ್ರೇಗೌಡ, ಪ್ರಜಾಪ್ರತಿನಿಧಿ ಸುರೇಶ್, ಮಧುಸೂಧನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment