ಭದ್ರಾವತಿ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ಪದ್ಮ ವಿಭೂಷಣ, ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಕ್ಷೇತ್ರದಲ್ಲಿ `ನಮ್ಮೂರು ನಮ್ಮ ಕೆರೆ' ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಯೋಜನೆಗೆ ಚಾಲನೆ ನೀಡಿದರು.
ಭದ್ರಾವತಿ: ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್-೧ರ ವತಿಯಿಂದ ಪದ್ಮ ವಿಭೂಷಣ, ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಕ್ಷೇತ್ರದಲ್ಲಿ `ನಮ್ಮೂರು ನಮ್ಮ ಕೆರೆ' ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಯೋಜನೆಗೆ ಚಾಲನೆ ನೀಡಿದರು.
ಕೆರೆ ಹೂಳು ತೆಗೆದು ಜನ ಹಾಗು ಜಾನುವಾರುಗಳಿಗೆ ಅನುಕೂಲ ಕಲ್ಪಿಸಿಕೊಡುವ ಜೊತೆಗೆ ಅಂತರ್ಜಲ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ರೂಪಿಸಲಾಗಿರುವ `ನಮ್ಮೂರು ನಮ್ಮ ಕೆರೆ' ಯೋಜನೆ ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಜ್ಜಿಗೇನಹಳ್ಳಿ ಗ್ರಾಮದ ಮಜ್ಜಿ ಕಟ್ಟೆ ಕೆರೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ.
ಕೆರೆ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವಸಂತ್. ಅಧ್ಯಕ್ಷ ದೇವರಾಜ್, ಯೋಜನೆ ಜಿಲ್ಲಾ ನಿರ್ದೇಶಕ ಮುರುಳಿಧರ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಪ್ರಕಾಶ್ ನಾಯಕ, ಅಭಿಯಂತರ ಗಣಪತಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೇಖರ್ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ಗ್ರಾಮಸ್ಥರು, ರೈತರು ಉಪಸ್ಥಿತರಿದ್ದರು.
No comments:
Post a Comment