Thursday, February 27, 2025

ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ



ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭದ್ರಾವತಿ ನ್ಯೂಟೌನ್ ರೋಟರಿ ಸಮುದಾಯ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಸಿ.ಪಿ.ಐ ರಾಜ್ಯ ಮಂಡಳಿ ಸದಸ್ಯರು, ಹಿರಿಯ ಕಾರ್ಮಿಕ ಮುಖಂಡರಾದ ಡಿ.ಸಿ ಮಾಯಣ್ಣ ಉದ್ಘಾಟಿಸಿದರು. 
    ಭದ್ರಾವತಿ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನ್ಯೂಟೌನ್ ರೋಟರಿ ಸಮುದಾಯ ಭವನದಲ್ಲಿ ಗುರುವಾರ ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಸಿ.ಪಿ.ಐ ರಾಜ್ಯ ಮಂಡಳಿ ಸದಸ್ಯರು, ಹಿರಿಯ ಕಾರ್ಮಿಕ ಮುಖಂಡರಾದ ಡಿ.ಸಿ ಮಾಯಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇದಕ್ಕೂ ಮೊದಲು ಸಂವಿಧಾನ ಪೀಠಿಕೆ ವಾಚಿಸಲಾಯಿತು. 
    ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ಉಪನ್ಯಾಸ ನೀಡಲಿದ್ದು, ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ ಶ್ರೀನಿವಾಸ್, ಎಂಪಿಎಂ ನೊಂದ ಕಾರ್ಮಿಕರ ಹೋರಾಟ ಸಮಿತಿ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಡಿಎಸ್‌ಎಸ್ ರಾಜ್ಯ ಮುಖಂಡರಾದ ಸತ್ಯ ಭದ್ರಾವತಿ ಮತ್ತು ಜ್ಯೂನಿಯರ್ ವಿಷ್ಣುವರ್ಧನ್ ಎಂದೇ ಗುರುತಿಸಿಕೊಂಡಿರುವ ಕಲಾವಿದ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಪೇಕ್ಷ ಮಂಜುನಾಥ್ ಅವರ ೬೦ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಅಲ್ಲದೆ ನಗರದ ಸುಮಾರು ೩೦ಕ್ಕೂ ಹೆಚ್ಚು ಗಣ್ಯರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು. 
ಸಾಹಿತಿ ಅರಳೇಹಳ್ಳಿ ಅಣ್ಣಪ್ಪ ಕಾರ್ಯಕ್ರಮ ನಿರೂಪಿಸಿದರು. ಮಾನವ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

No comments:

Post a Comment