ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಉಪ ನಿರೀಕ್ಷಕ ಕೆ.ಎಚ್ ಜಯಪ್ಪ ಅವರನ್ನು ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಪ್ರಸ್ತುತ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ನಗರದ ನ್ಯೂಟೌನ್, ಹಳೇನಗರ, ಹೊಸಮನೆ ಶಿವಾಜಿ ಸರ್ಕಲ್ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ವೃತ್ತಿ ಅವಧಿಯಲ್ಲಿ ಯಾವುದೇ ವಿವಾದಗಳಿಗೆ ಎಡೆಮಾಡಿಕೊಡದೆ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದರು.
ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಹಾಗು ಸಿಬ್ಬಂದಿ ವರ್ಗದವರು ಜಯಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು. ಜಯಪ್ಪ ಕುಟುಂಬ ವರ್ಗದವರು ಉಪಸ್ಥಿತರಿದ್ದರು.
No comments:
Post a Comment