ಆರೋಪಿ, ರೌಡಿಶೀಟರ್ ಶಹೀದ್
ಭದ್ರಾವತಿ: ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಮತ್ತೊಂದು ಘಟನೆ ನಡೆದಿದೆ.
ರೌಡಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ, ಸುಮಾರು ೧೨ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಶಹೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ನಗರದ ಪೇಪರ್‌ಟೌನ್ ಠಾಣೆ ಪೊಲೀಸರು ಈತನನ್ನು ಹಿಡಿಯಲು ಹೋದಾಗ ಪೊಲೀಸ್ ಕಾನ್ಸ್‌ಸ್ಟೇಬಲ್ ನಾಗರಾಜ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಠಾಣೆಯ ನಿರೀಕ್ಷಕಿ ನಾಗಮ್ಮ ಈತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಗಾಯಗೊಂಡಿರುವ ಶಹೀದ್‌ಗೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಳೆದ ೩ ದಿನಗಳ ಹಿಂದೆ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ರೌಡಿಶೀಟರ್ ಗುಂಡ ಅಲಿಯಾಸ್ ರವಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದರು.
ಶಹೀದ್ ೨೦೨೪ರಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಸಹ ಆರೋಪಿಯಾಗಿದ್ದ. ಯಾಸಿನ್ ಖುರೇಷಿಯ ಆಪ್ತ ಹಾಗೂ ಆದಿಲ್ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ಈತ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಎಂಬ ಆರೋಪ ಈತನ ಮೇಲಿದೆ.
No comments:
Post a Comment