ಭದ್ರಾವತಿ: ಪಾವನ ಮಾಸ ರಂಜಾನ್ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ತಾಲೂಕು ಘಟಕದ ವತಿಯಿಂದ ಮಾ.೧೫ರ ಶನಿವಾರ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಗಿದೆ.
ನಗರದ ಡಾ. ರಾಜ್‌ಕುಮಾರ್ ರಸ್ತೆ (ಬಿ.ಎಚ್ ರಸ್ತೆ), ಆಯಿಷಾ ಮಸೀದಿ ಸಭಾಂಗಣದಲ್ಲಿ ಸಂಜೆ ೫.೩೦ರಿಂದ ಸೌಹಾರ್ದ ಇಫ್ತಾರ್ ಕೂಟ ಆರಂಭಗೊಳ್ಳಲಿದ್ದು, ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕ ಜನಾಬ್ ಅಕ್ರಮ್ ಉಲ್ಲಾ ಷರೀಫ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment