Tuesday, March 18, 2025

ಮಾ.೨೩ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

    ಭದ್ರಾವತಿ: ಮುಂಬರಲಿರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಮಾ.೨೩ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. 
    ಕಾಂಗ್ರೆಸ್ ಮುಖಂಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್‌ರವರ ಗಾಂಧಿನಗರದ ನಿವಾಸದದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳು ಸಭೆಯಲ್ಲಿ ಉಪಸ್ಥಿತರಿರುವರು. ಸ್ಥಳೀಯ ಸಂಸ್ಥೆಗಳ ಪಕ್ಷದ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

No comments:

Post a Comment