ಭದ್ರಾವತಿ : ಆಯುಷ್ಮಾನ್ ಭಾರತ್ ಯೋಜನೆಯಡಿ ೭೦ ವರ್ಷ ಮೇಲ್ಪಟ್ಟವರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮ ಮಾ.೨೦ರ ಗುರುವಾರ ಸಂಜೆ ೬ ಗಂಟೆಗೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯದ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಕ್ಷದ ಯುವ ಮುಖಂಡರಾದ ಜಿ. ಆನಂದ ಕುಮಾರ್ ಮತ್ತು ಮಂಗೋಟೆ ರುದ್ರೇಶ್ ನೇತೃತ್ವದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಕ್ಯಾಲೆಂಡರ್ ಬಿಡುಗಡೆ :
ಪ್ರತಿವರ್ಷದಂತೆ ಈ ಬಾರಿ ಸಹ ಆನಂದ ಸಾಮಾಜಿ ಸೇವಾ ಸಂಸ್ಥೆ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುತ್ತಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment