ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು. ಕಾವೇರಿ ನದಿ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷೆ ಕೆ.ವಿ ಯಶೋಧ ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.
ಕಾವೇರಿ ನದಿ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷೆ ಕೆ.ವಿ ಯಶೋಧ ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು.
ಮಂಡ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಸುಜಾತ, ರೋಟರಿ ಕ್ಲಬ್ ಅಧ್ಯಕ್ಷ ಜಿ. ರಾಘವೇಂದ್ರ ಉಪಾಧ್ಯಾಯ, ನಳಿನ, ತಾರಾಮಣಿ ಮತ್ತು ಗಾಯತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವೇದಿಕೆ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಮಹಿಳಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಸಹಕಾರದೊಂದಿಗೆ ನೇತ್ರದಾನ ನೋಂದಾಣಿ ಶಿಬಿರ ಹಾಗು ಕ್ಯಾನ್ಸರ್ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಮಾರು ೩೫ ಮಹಿಳೆಯರು ನೇತ್ರದಾನ ನೋಂದಾಣಿ ಮಾಡಿಸಿಕೊಳ್ಳುವ ಮೂಲಕ ಗಮನ ಸೆಳೆದರು.
No comments:
Post a Comment