ಕನ್ನಡ ಫಿಲಂ ಚೇಂಬರ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಜನಪದ ಕಲಾ ಸೇವಾ ರತ್ನ ಪ್ರಶಸ್ತಿ ಭದ್ರಾವತಿ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜನಪದ ಕಲಾವಿದ ಎಂ.ಆರ್ ರೇವಣಪ್ಪ ಅವರಿಗೆ ಲಭಿಸಿದೆ.
ಭದ್ರಾವತಿ : ಕನ್ನಡ ಫಿಲಂ ಚೇಂಬರ್ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಜನಪದ ಕಲಾ ಸೇವಾ ರತ್ನ ಪ್ರಶಸ್ತಿ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜನಪದ ಕಲಾವಿದ ಎಂ.ಆರ್ ರೇವಣಪ್ಪ ಅವರಿಗೆ ಲಭಿಸಿದೆ.
ಕನ್ನಡ ಫಿಲಂ ಚೇಂಬರ್ ವತಿಯಿಂದ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗು ಸಾಧನೆಯ ದಾರಿಯಲ್ಲಿ ಸಾಗುತ್ತಿರುವ ಸಾಧಕರಿಗೆ ಸರಳತೆಯ ಶಿಖರ, ಕರ್ನಾಟಕ ರತ್ನ, ನಗು ಮುಖದ ಪರಮಾತ್ಮ, ಅಭಿಮಾನಿಗಳ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್‌ರವರ ಸ್ಪೂರ್ತಿಯೊಂದಿಗೆ ರಾಜ್ಯಮಟ್ಟದ ಪ್ರಶಸ್ತಿನೀಡಿ ಗೌರವಿಸಲಾಗುತ್ತಿದೆ.
ಎಂ.ಆರ್ ರೇವಣಪ್ಪರವರು ಮೂಲತಃ ಶಿಕ್ಷಕರಾಗಿದ್ದು, ವೃತ್ತಿಯೊಂದಿಗೆ ಜಾನಪದ ಅಂತರರಾಷ್ಟ್ರೀಯ ಡೊಳ್ಳು ನೃತ್ಯ ಕಲಾವಿದರು ಹಾಗು ಸುಗ್ಗಿ ಕುಣಿತ ಕೋಲಾಟ ಕಲಾವಿದರಾಗಿದ್ದಾರೆ. ಅಲ್ಲದೆ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷರಾಗಿದ್ದು, ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಅಂತರರಾಷ್ಟ್ರೀಯ ಹಾಗು ರಾಜ್ಯ ಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ.
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾ.೨೩ರಂz ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರೇವಣಪ್ಪರವರು `ಜನಪದ ಕಲಾ ಸೇವಾರತ್ನ' ಪ್ರಶಸ್ತಿ ಸ್ವೀಕರಿಸಿದರು. ರೇವಣಪ್ಪ ಅವರನ್ನು ನಗರದ ಜನಪ್ರತಿನಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment