ಭದ್ರಾವತಿ ನಗರಸಭೆ ವಾರ್ಡ್ ನಂ.೯ರ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿ ಕಳೆದ ಸುಮಾರು ೩ ತಿಂಗಳಿನಿಂದ ಚರಂಡಿ ಸ್ವಚ್ಛತೆ ಕೈಗೊಳ್ಳದ ಕಾರಣ ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.
ಭದ್ರಾವತಿ : ನಗರಸಭೆ ವಾರ್ಡ್ ನಂ.೯ರ ವ್ಯಾಪ್ತಿಯ ಭದ್ರಾ ಕಾಲೋನಿಯಲ್ಲಿ ಕಳೆದ ಸುಮಾರು ೩ ತಿಂಗಳಿನಿಂದ ಚರಂಡಿ ಸ್ವಚ್ಛತೆ ಕೈಗೊಳ್ಳದ ಕಾರಣ ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.
ನಗರ ಪ್ರದೇಶಕ್ಕೆ ಹೊಂದಿಕೊಂಡಿರುವ ಸ್ವಲ್ಪ ಗ್ರಾಮೀಣ ಭಾಗವಾಗಿರುವ ಭದ್ರಾ ಕಾಲೋನಿಯಲ್ಲಿ ಹೆಚ್ಚಿನ ನಿವಾಸಿಗಳು ವಾಸವಾಗಿದ್ದು, ನಗರಸಭೆ ವತಿಯಿಂದ ಪ್ರತಿದಿನ ಮನೆ ಮನೆ ಕಸ ಸಂಗ್ರಹಿಸಲಾಗುತ್ತಿದೆ. ಆದರೆ ಕಳೆದ ೩ ತಿಂಗಳಿನಿಂದ ಚರಂಡಿಗಳ ಸ್ವಚ್ಛತೆ ಕೈಗೊಂಡಿಲ್ಲ. ಇದರಿಂದಾಗಿ ಚರಂಡಿಗಳಲ್ಲಿ ಬಾರಿ ಪ್ರಮಾಣದಲ್ಲಿ ಕಸ ಸಂಗ್ರಹವಾಗಿದ್ದು, ಅಲ್ಲದೆ ಚರಂಡಿಗಳಲ್ಲಿ ನೀರು ಮುಂದೆ ಹರಿಯದೆ ನಿಂತುಕೊಳ್ಳುತ್ತಿದೆ. ಇದರಿಂದಾಗಿ ಚರಂಡಿಗಳು ಸೊಳ್ಳೆಗಳಿಗೆ ಆಶ್ರಯ ತಾಣಗಳಾಗಿ ಮಾರ್ಪಾಡಾಗಿವೆ.
ದೇವಸ್ಥಾನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅದರಲ್ಲೂ ಜನಸಂದಣಿ ಹೆಚ್ಚಾಗಿರುವ ಸ್ಥಳಗಳಲ್ಲಿ ಚರಂಡಿ ಸ್ವಚ್ಛತೆ ಕೈಗೊಳ್ಳದಿರುವುದುನಿವಾಸಿಗಳು ಮತ್ತಷ್ಟು ತೊಂದರೆ ಅನುಭವಿಸುವಂತಾಗಿದೆ. ಪ್ರಸ್ತುತ ಬೇಸಿಗೆ ಕಾಲವಾಗಿರುವುದರಿಂದ ಸೊಳ್ಳೆಗಳ ಸಂತತಿ ವೇಗವಾಗಿ ಬೆಳೆಯುತ್ತಿದ್ದು, ರೋಗರುಜಿನಗಳು ಹೆಚ್ಚಾಗುವ ಭೀತಿ ಎದುರಾಗಿದೆ. ಈಗಾಗಲೇ ಹಲವು ಬಾರಿ ವಾರ್ಡಿನ ನಗರಸಭೆ ಚುನಾಯಿತ ಸದಸ್ಯರಿಗೆ ಹಾಗು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಅಲ್ಲದೆ ತಕ್ಷಣ ಎಲ್ಲಾ ರಸ್ತೆಗಳ ಚರಂಡಿಗಳಲ್ಲಿ ಸ್ವಚ್ಛತೆ ಕೈಗೊಂಡು ಸೊಳ್ಳೆ ಹಾವಳಿಯಿಂದ ರಕ್ಷಿಸುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ.
No comments:
Post a Comment