ಭದ್ರಾವತಿ: ತಾಲೂಕಿನ ಗ್ರಾಮ ಪಂಚಾಯಿತಿಗಳ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟ ಸುಗ್ರಾಮ ವತಿಯಿಂದ ಮಾ.೧೫ರಂದು ಹಮ್ಮಿಕೊಳ್ಳಲಾಗಿರುವ ಮಹಿಳಾ ದಿನಾಚರಣೆ ಅಂಗವಾಗಿ ಒಡಲಾಳ ನಾಟಕ ಪ್ರದರ್ಶನಗೊಳ್ಳಲಿದೆ.
ನಗರದ ಡಾ. ರಾಜ್‌ಕುಮಾರ್ ರಸ್ತೆ (ಬಿ.ಎಚ್ ರಸ್ತೆ), ಕಾಂಚನ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರ ಒಡಲಾಳ ನಾಟಕ ಪ್ರದರ್ಶನಗೊಳ್ಳಲಿದ್ದು, ನಗರದ ರಂಗ ಕಲಾವಿದೆ ಇಂದು ಡಿ. ನೀನಾಸಂ ಸಾಕವ್ವನ ಪಾತ್ರ ಅಭಿನಯಿಸಲಿದ್ದಾರೆ. ರಂಗ ಕಲಾವಿದರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment