ಭದ್ರಾವತಿ ಕಾಗದನಗರದ ಪಾಳುಬಿದ್ದು ಶಿಥಿಲಗೊಂಡಿದ್ದ, ತುಂಬಾ ಹಳೇಯದಾದ ಮನೆಯೊಂದರಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ಗೋಡೆ ಕುಸಿದುಬಿದ್ದಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ.
ಭದ್ರಾವತಿ : ಕಾಗದನಗರದ ಪಾಳುಬಿದ್ದು ಶಿಥಿಲಗೊಂಡಿದ್ದ, ತುಂಬಾ ಹಳೇಯದಾದ ಮನೆಯೊಂದರಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ಗೋಡೆ ಕುಸಿದುಬಿದ್ದಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ.
ಸುಮಾರು ೩೮ ವರ್ಷದ ಆನಂದ ಸ್ವಾಮಿ ಎಂಬುವರು ಕಾಗದನಗರದ ೭ನೇ ವಾರ್ಡ್‌ನ ಪಾಳುಬಿದ್ದಿದ್ದ ಮನೆಯೊಂದರಲ್ಲಿ ಮಲಗಿದ್ದಾಗ ಸಂಜೆ ೫ ಗಂಟೆ ಸಮಯದಲ್ಲಿ ಏಕಾಏಕಿ ಮನೆಯ ಗೋಡೆ ಕುಸಿದು ಬಿದ್ದಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗ್ನಿಶಾಮಕದಳ ಸಿಬ್ಬಂದಿಗಳು ಧಾವಿಸಿ ಸ್ಥಳೀಯರೊಂದಿಗೆ ಜೆಸಿಬಿ ಯಂತ್ರದ ಮೂಲಕ ಗೋಡೆ ಮಣ್ಣು ತೆರವುಗೊಳಿಸಿ ರಕ್ಷಿಸಿದ್ದಾರೆ.
ಅಗ್ನಿಶಾಮಕಠಾಣೆ ಸಹಾಯಕ ಠಾಣಾಧಿಕಾರಿ ಸಿ.ಎಚ್ ಹುಲಿಯಪ್ಪ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಬು, ಆನಂದ್, ಮಂಜುನಾಥ್, ಸುರೇಶ್, ಶ್ರೀನಿವಾಸ್, ಹರೀಶ್, ಮಹೇಂದ್ರ, ರಾಜಾನಾಯ್ಕ, ವೀರೇಶ್, ಬಾಬಲು ಮಾಣಿಕ ಬಾಯ್ ಮತ್ತು ಸಿದ್ದಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment