ಸರ್ಕಾರದ ಆದೇಶ ಪತ್ರ ಅಥವಾ ತಿಳುವಳಿಕೆ ಪತ್ರ ಅಥವಾ ಸೂಚನಾ ಪತ್ರ ಸೇರಿದಂತೆ ಯಾವುದನ್ನು ಸಹ ನೀಡದೆ ಏಕಾಏಕಿ ಜಮೀನಿನಲ್ಲಿ ಬೆಳೆಯಲಾಗಿದ್ದ ಅಡಕೆ ಸಸಿಗಳನ್ನು ಕಿತ್ತು ಹಾಕಿ ಲಕ್ಷಾಂತರ ರು. ನಷ್ಟ ಉಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಕೂಡ್ಲಿಗೆರೆ ಹೋಬಳಿ, ರತ್ನಾಪುರ ಗ್ರಾಮದಲ್ಲಿ ಸೋಮವಾರದಿಂದ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಭದ್ರಾವತಿ: ಸರ್ಕಾರದ ಆದೇಶ ಪತ್ರ ಅಥವಾ ತಿಳುವಳಿಕೆ ಪತ್ರ ಅಥವಾ ಸೂಚನಾ ಪತ್ರ ಸೇರಿದಂತೆ ಯಾವುದನ್ನು ಸಹ ನೀಡದೆ ಏಕಾಏಕಿ ಜಮೀನಿನಲ್ಲಿ ಬೆಳೆಯಲಾಗಿದ್ದ ಅಡಕೆ ಸಸಿಗಳನ್ನು ಕಿತ್ತು ಹಾಕಿ ಲಕ್ಷಾಂತರ ರು. ನಷ್ಟ ಉಂಟು ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಕೂಡ್ಲಿಗೆರೆ ಹೋಬಳಿ, ರತ್ನಾಪುರ ಗ್ರಾಮದಲ್ಲಿ ಸೋಮವಾರದಿಂದ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಕೂಡ್ಲಿಗೆರೆ ಹೋಬಳಿ, ರತ್ನಾಪುರ ಗ್ರಾಮದ ನಿವಾಸಿ, ಪರಿಶಿಷ್ಟ ಜಾತಿ ಭೋವಿ ಜನಾಂಗಕ್ಕೆ ಸೇರಿರುವ ಉತ್ರೇಶ್ ಕುಟುಂಬದವರು ಸರ್ವೆ ನಂ.೬೩ ಮತ್ತು ೬೪ರಲ್ಲಿ ತಲಾ ೨ ಎಕರೆ ಜಮೀನು ಸುಮಾರು ೫೦-೬೦ ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಬಂಡಿ ರಸ್ತೆ ಇದ್ದರೂ ಸಹ ಮೇಲ್ವರ್ಗದವರು ಇವರ ಜಮೀನಿನಲ್ಲಿ ದಾರಿ ಪಡೆಯುವ ಉದ್ದೇಶದಿಂದ ಸುಮಾರು ೫೦ ರಿಂದ ೬೦ ಅಡಕೆ ಸಸಿಗಳನ್ನು ಕಿತ್ತು ಹಾಕಿ ಸುಮಾರು ೧೫ ರಿಂದ ೨೦ ಲಕ್ಷ ರು. ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಕೋರಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿಗಳು ಹಾಗು ಉಪ ವಿಭಾಗಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಎಚ್ಚರಿಸಲಾಗಿದೆ.
ಉತ್ರೇಶ್ ಹಾಗು ಕುಟುಂಬ ವರ್ಗದವರು, ಭೋವಿ ಸಮುದಾಯದ ಮುಖಂಡರು, ಗ್ರಾಮಸ್ಥರು ಸೇರಿದಂತೆ ಇನ್ನಿತರರು ಅಹೋ ರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.
No comments:
Post a Comment