ಎಚ್.ಎಸ್ ಮಾಯಮ್ಮ ನರಸಿಂಹಮೂರ್ತಿ ಅವರ ಮೊದಲ ಕವನ ಸಂಕಲನ `ಮನಸ್ಸು' ಕೃತಿ ಮುಖ ಪುಟ.
ಭದ್ರಾವತಿ : ತಾಲೂಕಿನ ದೇವರ ನರಸೀಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಎಸ್ ಮಾಯಮ್ಮ ನರಸಿಂಹಮೂರ್ತಿ ಅವರ ಮೊದಲ ಕವನ ಸಂಕಲನ `ಮನಸ್ಸು' ಕೃತಿ ಮಾ.೨೫ರಂದು sಸಂಜೆ ೭ ಗಂಟೆಗೆ ಬಿಡುಗಡೆಗೊಳ್ಳಲಿದೆ.
ಶ್ರೀ ಮಾರುತಿ ಕೃಪಾ ಪೋಷಿತ ನಾಟಕ ಮಂಡಳಿ ಸಂಯುಕ್ತಾಶ್ರಯದಲ್ಲಿ ಕುಣಿಗಲ್ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಶಾಸಕ ಎಚ್.ಡಿ ರಂಗನಾಥ್‌ರವರು ಕೃತಿ ಬಿಡುಗಡೆಗೊಳಿಸುತ್ತಿದ್ದಾರೆ. ಮೊದಲ ಕವನ ಸಂಕಲನ `ಮನಸ್ಸು' ಕೃತಿಗೆ ನಗರದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿ ಮುನ್ನುಡಿ ಬರೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಶಾಸಕ ಬಿ.ಕೆ ಸಂಗಮೇಶ್ವರ್ ಕೃತಿಯನ್ನು ಅಭಿನಂದಿಸಿದ್ದಾರೆ.
ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ತಾಲೂಕಿನ ಶಿಕ್ಷಕ ವೃಂದ, ಸಾಹಿತ್ಯಾಭಿಮಾನಿಗಳು, ಹಿತೈಷಿಗಳು ಸೇರಿದಂತೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment