ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯ ನಿರ್ಮಲಾ ಆಸ್ಪತ್ರೆ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ ಅದ್ದೂರಿಯಾಗಿ ಆಚರಿಸಲಾಯಿತು.
ಭದ್ರಾವತಿ: ಚಲನಚಿತ್ರ ನಟ, ಸಮಾಜ ಸೇವಕ, ಕರ್ನಾಟಕ ರತ್ನ, ಪವರ್‌ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬ ಸೋಮವಾರ ಕ್ಷೇತ್ರದ ವಿವಿಧೆಡೆ ಆಚರಿಸಲಾಯಿತು.
ವಿವಿಧ ಸಂಘಟನೆಗಳಿಂದ ಹಾಗು ಅಭಿಮಾನಿಗಳಿಂದ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬ ಹಲವು ವಿಶೇಷತೆಗಳೊಂದಿಗೆ ಆಚರಿಸುವ ಮೂಲಕ ಗಮನ ಸೆಳೆಯಲಾಯಿತು. ಅಪ್ಪು ಅಭಿಮಾನಿಗಳ ಬಳಗದಿಂದ ಬಿ.ಆರ್ ಪ್ರಾಜೆಕ್ಟ್‌ನಲ್ಲಿ ಜರುಗಿದ ಹುಟ್ಟುಹಬ್ಬದಲ್ಲಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್, ಯುವ ಮುಖಂಡರಾದ ಮುರುಗೇಶ್, ಟಿ.ಡಿ ಶಶಿಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕನಕ ಆಟೋ ನಿಲ್ದಾಣ :
ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ತಾಲೂಕು ಕಛೇರಿ ರಸ್ತೆಯ ನಿರ್ಮಲಾ ಆಸ್ಪತ್ರೆ ಸಮೀಪದ ಕನಕ ಆಟೋ ಚಾಲಕರ ಸಂಘದ ವತಿಯಿಂದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ ಅದ್ದೂರಿಯಾಗಿ ಆಚರಿಸಲಾಯಿತು.
ಪುನೀತ್ ರಾಜ್‌ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು. ನೂರಾರು ಮಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಯುವ ಮುಖಂಡ ಬಿ.ಎಸ್ ಗಣೇಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಸುರೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ನಗರಸಭೆ ಸದಸ್ಯ ಕೋಟೇಶ್ವರರಾವ್, ಮುಖಂಡರಾದ ದಶರಥ್ ಗಿರಿ, ಬಸವಂತಪ್ಪ, ಕೇಸರಿಪಡೆ ಅಧ್ಯಕ್ಷ ಗಿರೀಶ್, ಕುಮಾರ್ ಮಾಸ್ಟರ್, ತಾ. ಪಂ. ಮಾಜಿ ಸದಸ್ಯ ಶ್ರೀನಿವಾಸ್, ನದೀಮ್ ಬಾಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕುವೆಂಪು ಆಟೋ ನಿಲ್ದಾಣ :
ನಗರದ ರಂಗಪ್ಪ ವೃತ್ತದ ಕುವೆಂಪು ಆಟೋ ನಿಲ್ದಾಣದಲ್ಲಿ ಚಾಲಕರು ಹಾಗೂ ಮಾಲೀಕರು ಮತ್ತು ಅಪ್ಪು ಅಭಿಮಾನಿಗಳಿಂದ ಪುನೀತ್ ರಾಜ್‌ಕುಮಾರ್‌ರವರ ೫೦ನೇ ಹುಟ್ಟುಹಬ್ಬ ಆಚರಿಸಲಾಯಿತು.
ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರ ಸಮಾಜ ಸೇವೆಯನ್ನು ಸ್ಮರಿಸಲಾಯಿತು. ನೂರಾರು ಮಂದಿಗೆ ಅನ್ನ ಸಂತರ್ಪಣೆ ಏರ್ಪ ಡಿಸಲಾಗಿತ್ತು.
ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ :
ನಗರದ ಡಾ. ರಾಜ್‌ಕುಮಾರ್ ರಸ್ತೆ(ಬಿ.ಎಚ್ ರಸ್ತೆ), ಚಾಮೇಗೌಡ ಏರಿಯಾದ ಡಾ.ರಾಜ್‌ಕುಮಾರ್ ಹಾಗು ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಪವರ್‌ಸ್ವಾರ್ ಪುನೀತ್ ರಾಜ್‌ಕುಮಾರ್ ೫೦ನೇ ಹುಟ್ಟುಹಬ್ಬ ಆಚರಿಸಲಾಯಿತು.
ವಿಶೇಷ ಎಂದರೆ ಸಂಘಟನೆವತಿಯಿಂದ ಈಗಾಗಲೇ ಲಕ್ಷಾಂತರ ರು. ವೆಚ್ಚದಲ್ಲಿ ಪುನೀತ್‌ರಾಜ್‌ಕುಮಾರ್ ದೇವಾಲಯ ನಿರ್ಮಿಸಿ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವ್ಯಾಪಾರಸ್ಥರು, ವರ್ತಕರು, ಆಟೋಚಾಲಕರು, ಮಾಲೀಕರು ಹಾಗು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.
No comments:
Post a Comment