ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನ ಹೆಚ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರ ಸ್ವಾಮಿಯವರು ಭರವಸೆ ನೀಡಿದ್ದಾರೆ.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಗುತ್ತಿಗೆ ಕಾರ್ಮಿಕರ ನಿಯೋಗ ಶುಕ್ರವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಕಾರ್ಖಾನೆ ಅಭಿವೃದ್ಧಿ ಹೊಂದುವ ಯಾವುದೇ ಲಕ್ಷಣಗಳು ಕಂಡು ಬರುತ್ತಿಲ್ಲ. ಇದರಿಂದಾಗಿ ಕಾರ್ಮಿಕ ವಲಯ ಹಾಗು ಕ್ಷೇತ್ರದ ಜನತೆಯಲ್ಲಿ ಆತಂಕ ಛಾಯೆ ಆವರಿಸಿಕೊಂಡಿದ್ದು, ಅಲ್ಲದೆ ಗುತ್ತಿಗೆ ಕಾರ್ಮಿಕರಿಗೆ ಕೆಲಸದ ದಿನಗಳು ಹೆಚ್ಚಳವಾಗದ ಕಾರಣ ಸಂಕಷ್ಟದಲ್ಲಿ ಬದುಕುವಂತಾಗಿದೆ ಎಂದು ಎಂದು ನಿಯೋಗ ಅಳಲು ವ್ಯಕ್ತಪಡಿಸಿದೆ.
ಸಚಿವ ಕುಮಾರಸ್ವಾಮಿ ನಿಯೋಗಕ್ಕೆ ಸ್ಪಂದಿಸಿ ಕಾರ್ಖಾನೆ ಅಭಿವೃದ್ಧಿ ಹಾಗು ಗುತ್ತಿಗೆ ಕಾರ್ಮಿಕರಿಗೆ ಕೆಲಸ ದಿನ ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ತಿಳಿಸಿದ್ದಾರೆ.
ನಿಯೋಗದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಪದಾಧಿಕಾರಿಗಳು, ನಿರ್ದೇಶಕರು ಪಾಲ್ಗೊಂಡಿದ್ದರು.
No comments:
Post a Comment