ಸೈಲ್-ವಿಐಎಸ್‌ಎಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಶನಿವಾರ ಕಾರ್ಖಾನೆಯ ಆಡಳಿತ ಕಛೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.
ಭದ್ರಾವತಿ: ಕೈಗಾರಿಕಾ ಕ್ಷೇತ್ರದಲ್ಲೂ ಮಹಿಳೆಯರ ಕೊಡುಗೆ ಹೆಚ್ಚಿನದ್ದಾಗಿದ್ದು, ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕೆಂದು ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹೇಳಿದರು.
ಅವರು ಶನಿವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಖಾನೆಯ ಆಡಳಿತ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಖಾನೆಯಲ್ಲಿ ಮಹಿಳಾ ಸಮುದಾಯದ ಸಾಧನೆ ವಿಶಿಷ್ಟವಾಗಿದ್ದು, ಹಲವಾರು ಸಾಧನೆಗಳ ಮೂಲಕ ಮಹಿಳಾ ಸಮುದಾಯ ಗಮನ ಸೆಳೆದಿದೆ. ಸಮಾಜಕ್ಕೆ ಮತ್ತು ಕಾರ್ಖಾನೆಗೆ ಅವರ ಕೊಡುಗೆ ಅನನ್ಯವಾಗಿದೆ. ಈ ಬಾರಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ `ಮಹಿಳೆಯರು ಮತ್ತು ಬಾಲಕಿಯರಿಗಾಗಿ ಹಕ್ಕುಗಳು, ಸಮಾನತೆ ಮತ್ತು ಸಬಲತೆ' ಎಂಬ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ಮಹಿಳೆಯರಿಗೆ ಪ್ರೋತ್ಸಾಹ ಮತ್ತು ಸಹಕಾರ ನೀಡುವ ಮೂಲಕ ಅವರು ತಮ್ಮ ಸಾಮಥ್ಯ ಪ್ರದರ್ಶಿಸುವಲ್ಲಿ ಉಕ್ಕು ಪ್ರಾಧಿಕಾರ ಸಹಕಾರಿಯಾಗಿದೆ ಎಂದರು.
ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಹಣಕಾಸು) ಶೋಭ ಶಿವಶಂಕರನ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಡಾ. ಸುಷ್ಮ, ಡಾ. ಶೋಭ, ಅಪರ್ಣ, ನಾಗರತ್ನ, ಅಮೃತಾ, ರಕ್ಷಿತಾ, ಕುಸುಮ, ಪ್ರೇಮ ಬಾಯಿ, ಗಿರಿಜಾ, ಅಮಿತಾ, ಮಂಜುಶ್ರೀ, ರಮ್ಯ ಮತ್ತು ತ್ರಿವೇಣಿ ಸೇರಿದಂತೆ ಇನ್ನಿತರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಖಾನೆಯ ಕಾಯಂ ಹಾಗು ಗುತ್ತಿಗೆ ಮಹಿಳಾ ಕಾರ್ಮಿಕರಿಗೆ ವಿನೋದದ ಆಟಗಳನ್ನು ಹಾಗು ವಿಡಿಯೋ ಸಂವಾದ ಆಯೋಜಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಲ್ಲದೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಹೈಬ್ರೀಡ್ ತಳಿಯ ಪಪ್ಪಾಯಿ ಮತ್ತು ನುಗ್ಗೆ ಸಸಿಗಳನ್ನು ವಿತರಿಸಲಾಯಿತು. ವಿಐಎಸ್‌ಎಲ್ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಶೋಭ ಕಾರ್ಯಕ್ರಮ ನಿರೂಪಿಸಿದರು.
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಶನಿವಾರ ಕಾರ್ಖಾನೆಯ ಆಡಳಿತ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ವಿನೋದದ ಆಟಗಳನ್ನು ಏರ್ಪಡಿಸಲಾಗಿತ್ತು.
No comments:
Post a Comment