ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ `ಪ್ರೇರಣಾ ಸ್ಪೂರ್ತಿ ಪಸರಿಸೋಣ!' ಉಪಕ್ರಮದಡಿ ಹಮ್ಮಿಕೊಂಡಿದ್ದ `ಮಹಿಳಾ ಸಬಲೀಕರಣ, ನೈರ್ಮಲ್ಯ ಮತ್ತು ಸುರಕ್ಷತೆ' ವಿಶೇಷ ಉಪನ್ಯಾಸ ಕಾರ್ಯಕ್ರಮ ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಶುಭಾ ಮರವಂತೆ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ: ಮಹಿಳೆಯರು ಸೈಬರ್ ಅಪರಾಧ ಕುರಿತು ಹೆಚ್ಚಿನ ಮಾಹಿತಿ ಹೊಂದುವ ಮೂಲಕ ಎಚ್ಚರಿಕೆ ವಹಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಶುಭಾ ಮರವಂತೆ ಹೇಳಿದರು.
ಅವರು ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ `ಪ್ರೇರಣಾ ಸ್ಪೂರ್ತಿ ಪಸರಿಸೋಣ!' ಉಪಕ್ರಮದಡಿ ಹಮ್ಮಿಕೊಂಡಿದ್ದ `ಮಹಿಳಾ ಸಬಲೀಕರಣ, ನೈರ್ಮಲ್ಯ ಮತ್ತು ಸುರಕ್ಷತೆ' ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಧುನಿಕ ಜಗತ್ತಿನಲ್ಲಿ ಮಹಿಳೆ ಪಾತ್ರ ಹೆಚ್ಚಿನದ್ದಾಗಿದೆ. ಪ್ರಸ್ತುತ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಬಗ್ಗೆ ಹೆಣ್ಣು ಮಕ್ಕಳು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್ ಹೊಸಳ್ಳೇರ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ವಿ.ಬಿ ಚಿರಂಜೀವಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವಿದ್ಯಾರ್ಥಿನಿಯರಾದ ಎಸ್. ಶಿಲ್ಪ ಮತ್ತು ಪ್ರತೀಕ್ಷಾ ಪ್ರಾರ್ಥಿಸಿ, ಲಿಂಗೇಶ್ ಸ್ವಾಗತಿಸಿದರು. ಯತೀಶ್ ಎಲ್ ಗೌಡ ಕಾರ್ಯಕ್ರಮ ನಿರೂಪಿಸಿ, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಪ್ರೇರಣಾ ಸಂಚಾಲಕಿ ಡಾ. ಟಿ.ಜಿ ಉಮಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಧ್ಯಾಪಕರಾದ ಮುಜಾಮಿಲ್ ಖಾನ್ ಮತ್ತು ಮೊಹಮ್ಮದ್ ನಜೀಬ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿನಿ ಚತುರ್ಥಿ ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ