ಭದ್ರಾವತಿ : ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ, ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಹಾಗು ಅಪರಂಜಿ ಅಭಿನಯ ಶಾಲೆ ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ೧೦೦ನೇ ಜನ್ಮದಿನೋತ್ಸವ ಅಂಗವಾಗಿ ಏ.೧ ರಿಂದ ೧೦ರವರೆಗೆ ೧೦ದಿನಗಳವರೆಗೆ ಆಯೋಜಿಸಲಾಗಿದೆ.
ಪ್ರತಿ ವರ್ಷದಂತೆ ಈ ಬಾರಿ ಸಹ ರಂಗಕರ್ಮಿ, ಕಿರುತೆರೆ-ಚಲನಚಿತ್ರ ನಟ ಅಪರಂಜಿ ಶಿವರಾಜ್‌ರವರ ನೇತೃತ್ವದಲ್ಲಿ ಶಿಬಿರ ನ್ಯೂಟೌನ್ ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಶಿಬಿರದಲ್ಲಿ ೫ ರಿಂದ ೧೫ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ.
ಡ್ರಾಮಾ ಜ್ಯೂನಿಯರ್, ಅಭಿನಯ ತರಬೇತಿ, ಗೀತಗಾಯನ, ನೃತ್ಯ, ಚಿತ್ರಕಲೆ, ವ್ಯಕ್ತಿತ್ವ ವಿಕಸನ ಮತ್ತು ಕಲಾಕೃತಿ ರಚನೆ(ಕ್ರಾಫ್ಟ್ ವರ್ಕ್ಸ್) ಚಟುವಟಿಕೆಗಳು ಶಿಬಿರದಲ್ಲಿ ನಡೆಯಲಿವೆ. ಶಿಬಿರ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೩.೩೦ರವರೆಗೆ ನಡೆಯಲಿದ್ದು, ೨೫ ರಿಂದ ೩೦ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಲು ಮೊ: ೯೯೮೦೫೩೪೪೦೬ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment