ಭದ್ರಾವತಿ ನಗರಸಭೆ ವತಿಯಿಂದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಪಿ. ಭವ್ಯ, ಡಾ. ವಿಜಯದೇವಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ : ಸಾಧಕ ಮಹಿಳೆಯರನ್ನು ನೆನಪಿಕೊಳ್ಳುವ ಜೊತೆಗೆ ಅವರ ದಾರಿಯಲ್ಲಿ ನಾವುಗಳು ಸಹ ಸಾಗುವಂತಹ ದಿನ ಮಹಿಳಾ ದಿನಾಚರಣೆಯಾಗಬೇಕೆಂದು ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಹೇಳಿದರು.
ನಗರಸಭೆ ವತಿಯಿಂದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಗಳಿಂದ ಹೊರಬಾರದಿರುವ ಕಾಲಘಟ್ಟದಲ್ಲಿ ಶಿಕ್ಷಣಪಡೆದು ಈ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿಯಾಗುವ ಮೂಲಕ ಮಹಿಳೆಯರ ಆಶಾಕಿರಣವಾಗಿ ಭವಿಷ್ಯದ ಸಮಾಜಕ್ಕೆ ಮಾದರಿಯಾಗಿರುವ ಸಾವಿತ್ರಿಬಾಯಿ ಪುಲೆ ಅವರ ಬದುಕು, ಶಿಕ್ಷಣ ಪಡೆಯಲು ಅವರು ಅನುಭವಿಸಿದ ಸಂಕಷ್ಟ ಹಾಗು ಶಿಕ್ಷಕಿಯಾಗಿ ಕೈಗೊಂಡ ಸಾಮಾಜಿಕ ಸುಧಾರಣೆಗಳು ಇಂದಿಗೂ ಅವಿಸ್ಮರಣೀಯವಾಗಿವೆ. ಇಂತಹ ಮಹಿಳಾ ಸಾಧಕಿಯನ್ನು ಹಾಗು ಒನಕೆ ಓಬವ್ವ, ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಅಕ್ಕಮಹಾದೇವಿ ಸೇರಿದಂತೆ ಅನೇಕ ಸಾಧಕ ಮಹಿಳೆಯರು ನಮಗೆ ಆದರ್ಶಪ್ರಾಯರಾಗಿದ್ದಾರೆ. ಇಂತಹ ಸಾಧಕ ಮಹಿಳೆಯರನ್ನು ನೆನಪಿಕೊಳ್ಳುವ ಜೊತೆಗೆ ಅವರ ದಾರಿಯಲ್ಲಿ ನಾವುಗಳು ಸಹ ಸಾಗಬೇಕೆಂದರು.
ಶಿವಮೊಗ್ಗ ಕಾರಾಗೃಹ ಸಹಾಯಕ ಅಧೀಕ್ಷಕಿ ಪಿ. ಭವ್ಯ, ಸಾಹಿತಿ, ನಿವೃತ್ತ ಪ್ರಾಧ್ಯಾಪಕಿ ಎಮೆರಿಟಸ್ ಡಾ. ವಿಜಯದೇವಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಬಿ.ಕೆ ಮೋಹನ್, ಬಸವರಾಜ ಬಿ. ಆನೇಕೊಪ್ಪ, ಅನುಸುಧಾ ಮೋಹನ್ ಪಳನಿ, ಶೃತಿ ವಸಂತಕುಮಾರ್, ಮಂಜುಳಾ ಸುಬ್ಬಣ್ಣ, ಶಶಿಕಲಾ ನಾರಾಯಣ, ಜಯಶೀಲ ಸುರೇಶ್, ಪಲ್ಲವಿ, ಕೋಟೇಶ್ವರಾವ್, ಲತಾ ಚಂದ್ರಶೇಖರ್, ಅನುಪಮ ಚನ್ನೇಶ್, ಐ.ವಿ ಸಂತೋಷ್, ರಾಜೇಂದ್ರ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಗರಸಭೆ ಮಹಿಳಾ ಸಿಬ್ಬಂದಿಗಳು, ಮಹಿಳಾ ಪೌರಕಾರ್ಮಿಕರು, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
No comments:
Post a Comment