ಭದ್ರಾವತಿ: ನಗರದ ನ್ಯೂಟೌನ್ ಗಾಂಧಿ ಉದ್ಯಾನವನ ಸಮೀಪ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ರಮೇಶ್‌ರವರು ಮಾ.೧೨ರಂದು ಸಂಜೆ ೬.೩೦ರ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಓರ್ವ ವ್ಯಕ್ತಿ ಗಾಂಜಾ ಸೇವನೆ ಮಾಡಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಆತನನ್ನು ವಶಕ್ಕೆ ಪಡೆದು ಸಾರ್ವಜನಿಕ ಸರ್ಕಾರಿಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
No comments:
Post a Comment