ಸೋಮವಾರ, ಏಪ್ರಿಲ್ 14, 2025

ಅಂಬೇಡ್ಕರ್ ಜಯಂತಿ : ಅಗ್ನಿಶಾಮಕ ಸೇವಾ ಸಪ್ತಾಹಕ್ಕೆ ಚಾಲನೆ

ಭದ್ರಾವತಿ ನಗರದ ಅಗ್ನಿಶಾಮಕ ಠಾಣೆಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಯೊಂದಿಗೆ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 
    ಭದ್ರಾವತಿ: ನಗರದ ಅಗ್ನಿಶಾಮಕ ಠಾಣೆಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಯೊಂದಿಗೆ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 
    ಗ್ರಾಮಗಳಲ್ಲಿ ಬೈಕ್ ಜಾಥಾ, ಉಪನ್ಯಾಸ ಹಾಗು ಪ್ರಾತ್ಯಕ್ಷಿತೆ ನಡೆಸುವ ಮೂಲಕ ಕರಪತ್ರಗಳನ್ನು ವಿತರಿಸಿ ಅಗ್ನಿ ಅವಘಡಗಳ ಕುರಿತು ಹಾಗು ಮುನ್ನಚ್ಚರಿಕೆಗಳನ್ನು ಅನುಸರಿಸುವ ಸಂಬಂಧ ಜಾಗೃತಿ ಮೂಡಿಸಲಾಯಿತು. ಅಲ್ಲದೆ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸುವ ಮೂಲಕ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಅಗ್ನಿಶಾಮಕ ಸೇವಾ ಸಪ್ತಾಹ : 
    ಏ.೧೪, ೧೯೪೪ರಂದು ಮುಂಬೈನ ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುತ್ತಿದ್ದ `ಎಸ್.ಎಸ್. ಪೋರ್ಟ್ ಸ್ಟೈಕೈನ್' ಎಂಬ ಹಡಗು ಘೋರ ಅಗ್ನಿ ಅನಾಹುತಕ್ಕೆ ಒಳಗಾಗಿದ್ದು, ಆ ಬೆಂಕಿಯನ್ನು ನಂದಿಸಲು ಮುಂಬೈ ಫೈರ್ ಬ್ರಿಗೇಡ್‌ನ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಕಾರ್ಯ ನಿರತರಾಗಿದ್ದ ಸಂದರ್ಭದಲ್ಲಿ ಹಡಗು ಸ್ಪೋಟಗೊಂಡು  ಅಧಿಕಾರಿಗಳು ಹಾಗು ಸಿಬ್ಬಂದಿಗಳು ೬೬ ಜನ ವೀರ ಮರಣ ಹೊಂದಿದರು. ಈ ಹುತಾತ್ಮರ ನೆನಪಿಗಾಗಿ ಏ.೧೪ರಂದು ಹುತಾತ್ಮರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.  ಅಲ್ಲದೆ ಪ್ರತಿ ವರ್ಷ ಏ.೧೪ ರಿಂದ ೨೦ರವರೆಗೆ ದೇಶದಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ. 
    ಅಗ್ನಿಶಾಮಕ ಠಾಣೆಯಲ್ಲಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಠಾಣಾಧಿಕಾರಿ ವಸಂತಕುಮಾರ್ ನೇತೃತ್ವದಲ್ಲಿ ಪುಷ್ಪನಮನಗಳನ್ನು ಸಲ್ಲಿಸಲಾಯಿತು. ಅಲ್ಲದೆ ಹುತಾತ್ಮ ವೀರ ಅಗ್ನಿಶಾಮಕರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ