ಭದ್ರಾವತಿ ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ ಉತ್ತರ ತೀರ್ಥ ಉತ್ಸವ ಜಾತ್ರಾ ಮಹೋತ್ಸವ ಏ.೧೧ರಂದು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಶನಿವಾರ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಹಾಗು ತರೀಕೆರೆ ಎಂ.ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮೇಗೌಡರವರು ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಭದ್ರಾವತಿ: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಪಂಗುಣಿ ಉತ್ತರ ತೀರ್ಥ ಉತ್ಸವ ಜಾತ್ರಾ ಮಹೋತ್ಸವ ಏ.೧೧ರಂದು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಶನಿವಾರ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ ಹಾಗು ತರೀಕೆರೆ ಎಂ.ಸಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮೇಗೌಡರವರು ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿರುವ ಮೂಲ ವಿಗ್ರಹಗಳಿಗೆ ಅಭಿಷೇಕ, ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಶ್ರೀ ಭದ್ರಗಿರಿ ಸೇವಾ ಟ್ರಸ್ಟ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸೇವಾಕರ್ತರು ಉಪಸ್ಥಿತರಿದ್ದರು. ಶಿವಮೊಗ್ಗ ಹಾಗು ಚಿಕ್ಕಮಗಳೂರು ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಏ.೧೧ರಂದು ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
No comments:
Post a Comment