ಪ್ರತಿವರ್ಷದಂತೆ ಈ ಬಾರಿ ಭದ್ರಾವತಿ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನೆ ಸಂಘ (ಬಿಪಿಎಲ್)ದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೪ನೇ ಜನ್ಮ ದಿನ ಆಚರಿಸಲಾಯಿತು.
ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನೆ ಸಂಘ (ಬಿಪಿಎಲ್)ದ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೪ನೇ ಜನ್ಮ ದಿನ ಆಚರಿಸಲಾಯಿತು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಹಿ ಹಂಚಲಾಯಿತು. ಸಂಘದ ಪ್ರಮುಖರಾದ ಶ್ಯಾಮ್, ಜಗದೀಶ್, ಡಿಎಸ್‌ಎಸ್ ಮುಖಂಡ ದಾಸ್, ಸ್ಟೀಫನ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಬಿಪಿಎಲ್ ಸಂಘ ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕಾರ್ಯಗಳೊಂದಿಗೆ ರಾಷ್ಟ್ರೀಯ ಹಬ್ಬಗಳು ಸೇರಿದಂತೆ ಮಹಾಪುರುಷರ, ದಾರ್ಶನಿಕರ ಹಾಗು ಆದರ್ಶ ವ್ಯಕ್ತಿಗಳ ಜನ್ಮದಿನಾಚರಣೆ ಸಹ ಆಚರಿಸಿಕೊಂಡು ಬರಲಾಗುತ್ತಿದೆ. ಈ ಮೂಲಕ ಸಂಘ ಈ ಭಾಗದಲ್ಲಿ ಗಮನ ಸೆಳೆಯುತ್ತಿದೆ.
No comments:
Post a Comment