ಭದ್ರಾವತಿ : ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಏ.೩ರಂದು ಸಂಜೆ ೬ ಗಂಟೆಗೆ ಜನ್ನಾಪುರ, ರಾಜಪ್ಪ ಲೇಔಟ್, ಅಂಗಾಳ ಪರಮೇಶ್ವರಿ ನಿಲಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ವಿಕಸಂ ಹಿರಿಯ ರಂಗಕಲಾವಿದ ಕೆ.ಬಿ ಕಪನಿಗೌಡ, ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಘದ ಉಪಾಧ್ಯಕ್ಷೆ ರತ್ನಾ ಗಂಗಾಧರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಕಸಂ ಹಿರಿಯ ರಂಗಕಲಾವಿದ ಕೆ.ಎಸ್ ರವಿಕುಮಾರ್‌ರವರಿಗೆ ಗೌರವ ಸಮರ್ಪಣೆ ನಡೆಯಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಾನಪದ ಕಲಾವಿದ ತಮಟೆ ಜಗದೀಶ್ ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ