ಭದ್ರಾವತಿ : ನಗರಸಭೆ ವತಿಯಿಂದ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಏ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ನಗರಸಭೆ ಕಛೇರಿಯಲ್ಲಿ ಆಯೋಜಿಸಲಾಗಿರುವ ಶಿಬಿರದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು ಹಾಗು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುವುದು. ಶಿಬಿರದ ಸದುಪಯೋಗಪಡಿಸಿಕೊಳ್ಳುವಂತೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ.
No comments:
Post a Comment