Tuesday, April 15, 2025

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡು

ಆರೋಪಿ ನಸ್ರಲ್ಲಾ ಕಾಲಿಗೆ ಗುಂಡು ಹಾರಿಸಿದ ಉಪನಿರೀಕ್ಷಕ ಚಂದ್ರಶೇಖರ ನಾಯ್ಕ 

 ಗಾಂಜಾ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಸ್ರುಲ್ಲಾ 
    ಭದ್ರಾವತಿ: ಇತ್ತೀಚೆಗೆ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಪ್ರವೃತ್ತಿ ಹೆಚ್ಚಾಗಿದ್ದು, ಹಳೇನಗರ ಠಾಣೆ ಪೊಲೀಸರು ಈ ಬಾರಿ ಗಾಂಜಾ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಸ್ರುಲ್ಲಾ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. 
    ಮಂಗಳವಾರ ಬೆಳಗಿನ ಜಾವ ಈತನನ್ನು ಬಂಧಿಸಲು ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಮೌನೇಶ್ ಎಂಬುವರ ಮೇಲೆ ತೀವ್ರ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಠಾಣೆಯ ಉಪನಿರೀಕ್ಷಕ ಚಂದ್ರಶೇಖರನಾಯ್ಕರವರು ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. 
    ಗಾಯಗೊಂಡಿರುವ ನಸ್ರುಲ್ಲಾನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈತನ ವಿರುದ್ಧ ಹಲವು ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. 
    ಈ ಹಿಂದೆ ಇದೆ ರೀತಿಯ ಪ್ರಕರಣಗಳಲ್ಲಿ ಪೇಪರ್‌ಟೌನ್ ಪೊಲೀಸ್ ಠಾಣೆ ನಿರೀಕ್ಷಕಿ ನಾಗಮ್ಮ ೨ ಬಾರಿ ಹಾಗು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣ ಕುಮಾರ್ ಮಾನೆ ಸಹ ತಪ್ಪಿಸಿಕೊಳ್ಳಲು ಯತ್ನಿಸಿದವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. 

No comments:

Post a Comment