ಭದ್ರಾವತಿ : ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಶ್ರೀ ಅಕ್ಕಮಹಾದೇವಿ ಬಳಗದಿಂದ ಏ.೧೨ರಂದು ಕನ್ನಡದ ಪ್ರಪ್ರಥಮ ಮಹಿಳಾ ಕವಯಿತ್ರಿ ಶ್ರೀ ಅಕ್ಕಮಹಾದೇವಿಯವರ ಜಯಂತ್ಯೋತ್ಸವ ಸಮಾರಂಭ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಬಸವಕೇಂದ್ರ ಹಾಗು ಚಿಕ್ಕಮಗಳೂರು ಬಸವತತ್ವ ಪೀಠದ ಶ್ರೀ ಡಾ. ಬಸವಮರುಳಸಿದ್ದ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯವಹಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ.
ಶ್ರೀ ಅಕ್ಕಮಹಾದೇವಿ ಬಳಗದ ಅಧ್ಯಕ್ಷೆ ಸುವರ್ಣಮ್ಮ ಹಿರೇಮಠ್ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸದಸ್ಯೆ ಅನುಪಮ ಚನ್ನೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಬಸವ ಕೇಂದ್ರದ ಅಧ್ಯಕ್ಷ ಜಗದೀಶ್ ಕವಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಪ್ರಮುಖರಾದ ಬಾರಂದೂರು ಪ್ರಕಾಶ್ ಅಕ್ಕಮಹಾದೇವಿಯವರ ಜೀವನ ಸಾಧನೆ ಸಂದೇಶ ಕುರಿತು ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment