ಭದ್ರಾವತಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ, ರಾಜಪ್ಪ ಲೇಔಟ್, ಅಂಗಾಳ ಪರಮೇಶ್ವರಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ : ಪ್ರಸ್ತುತ ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕಿದ್ದ ರಂಗಭೂಮಿ ಇಂದು ಸಂಕುಚಿತಗೊಂಡಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ವಿಕಸಂ ಹಿರಿಯ ರಂಗಕಲಾವಿದ ಕೆ.ಬಿ ಕಪನಿಗೌಡ ವಿಷಾದ ವ್ಯಕ್ತಪಡಿಸಿದರು.
ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ, ರಾಜಪ್ಪ ಲೇಔಟ್, ಅಂಗಾಳ ಪರಮೇಶ್ವರಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ, ರಾಜಪ್ಪ ಲೇಔಟ್, ಅಂಗಾಳ ಪರಮೇಶ್ವರಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ನೀನಾಸಂ ಕಲಾವಿದರಾದ ಕನ್ನಡ ಉಪನ್ಯಾಸಕ ಬಿ.ಎಚ್ ಗಿರಿಧರಮೂರ್ತಿ ಅವರ ರಾವಣನ ಪ್ರಾತ್ರಾಭಿನಯ ಪ್ರೇಕ್ಷಕರ ಮನಸೂರೆಗೊಂಡಿತು.
ರಂಗಭೂಮಿ ಕಲೆಗೆ ಪ್ರಸಿದ್ದವಾಗಿದ್ದ ನಗರದಲ್ಲಿ ಇಂದು ರಂಗಭೂಮಿ ಅವನತಿ ದಾರಿ ಹಿಡಿಯುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಒಂದು ಕಾಲದಲ್ಲಿ ಬಯಲು ರಂಗಮಂದಿರ ಸೇರಿದಂತೆ ದೊಡ್ಡ ದೊಡ್ಡ ವೇದಿಕೆಗಳಲ್ಲಿ ರಂಗಭೂಮಿ ಕಲಾವಿದರು ತಮ್ಮ ಅಭಿನಯದ ಮೂಲಕ ಸಾವಿರಾರು ಪ್ರೇಕ್ಷಕರ ಮನಗೆಲ್ಲುತ್ತಿದ್ದ ಕಾಲ ಇಂದು ಕಣ್ಮರೆಯಾಗಿದೆ. ಈ ಹಿಂದೆ ಬಹಳಷ್ಟು ರಂಗ ತಂಡಗಳಿದ್ದವು. ರಂಗ ಕಲಾವಿದರು ಸಹ ಬಹಳಷ್ಟು ಮಂದಿ ಇದ್ದರು. ಆದರೆ ಇಂದು ರಂಗ ತಂಡಗಳು ಕಣ್ಮರೆಯಾಗಿವೆ. ಈ ನಡುವೆ ಬೆರಳೆಣಿಕೆಯಷ್ಟು ಕಲಾವಿದರು ಕಂಡು ಬರುತ್ತಿರುವುದು ನೋವಿನ ಸಂಗತಿಯಾಗಿದೆ. ರಂಗ ಕಲೆ ಉಳಿಸಿಕೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಜಾನಪದ ಕಲಾವಿದ ತಮಟೆ ಜಗದೀಶ್‌ರವರು ಕೈಗೊಂಡಿರುವ ಪ್ರಯತ್ನ ಶ್ಲಾಘನೀಯ ಎಂದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್, ಜೀ ಕನ್ನಡ ಟಿವಿ ಚಾನಲ್‌ನಲ್ಲಿ ಪ್ರಸಾರವಾಗುವ `ಲಕ್ಷ್ಮೀ ನಿವಾಸ' ಧಾರವಾಹಿ ಮೂಗ ವೆಂಕಿ ಪಾತ್ರಧಾರಿ ಹವ್ಯಾಸಿ ರಂಗಭೂಮಿ ಕಲಾವಿದ ಚಂದ್ರಶೇಖರ ಶಾಸ್ತ್ರಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಸಂಘದ ಉಪಾಧ್ಯಕ್ಷೆ ರತ್ನಾ ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ವಿಕಸಂ ಹಿರಿಯ ರಂಗಕಲಾವಿದ ಕೆ.ಎಸ್ ರವಿಕುಮಾರ್‌ರವರಿಗೆ ಗೌರವ ಸಮರ್ಪಣೆ ನಡೆಯಿತು.
ಭದ್ರಾವತಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ಜನ್ನಾಪುರ, ರಾಜಪ್ಪ ಲೇಔಟ್, ಅಂಗಾಳ ಪರಮೇಶ್ವರಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ನೀನಾಸಂ ಕಲಾವಿದರಾದ ಡಿ. ಇಂದುರವರ ವೀರರಾಣಿ ಕಿತ್ತೂರು ರಾಣಿ ಕಿತ್ತೂರು ಚೆನ್ನಮ್ಮನ ಪ್ರಾತ್ರಾಭಿನಯ ಪ್ರೇಕ್ಷಕರ ಮನ ಸೆಳೆಯಿತು.
ನಿವೃತ್ತ ಉಪನ್ಯಾಸಕ ಪ್ರೊ. ಎಂ. ಚಂದ್ರಶೇಖರಯ್ಯ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಯು. ಮಹಾದೇವಪ್ಪ ಸೇರಿದಂತೆ ಸ್ಥಳೀಯ ಕಲಾವಿದರು.
ಪ್ರಧಾನ ಕಾರ್ಯದರ್ಶಿ ತಮಟೆ ಜಗದೀಶ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್ ಬಿ.ಇಡಿ ಕಾಲೇಜಿನ ಉಪನ್ಯಾಸಕ ಹನುಮಂತಪ್ಪ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment