ಭದ್ರಾವತಿ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರ ಅಧ್ಯಕ್ಷರಾದ ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರ ಅಧ್ಯಕ್ಷರಾದ ನಿವೃತ್ತ ಪ್ರಾಂಶುಪಾಲ ಶಿವಬಸಪ್ಪ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಜರುಗಿದ ಡಾ.ಬಾಬು ಜಗಜೀವನ ರಾಮ್ ೧೧೮ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಶಿವಬಸಪ್ಪರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಮಾರು ೩ ದಶಕಗಳಿಂದಲೂ ಶಿವಬಸಪ್ಪರವರು ಸಿದ್ದಾರ್ಥ ಅಂಧರ ಕೇಂದ್ರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಅಲ್ಲದೆ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಈ ನಡುವೆ ದಲಿತ ಸಂಘರ್ಷ ಸಮಿತಿ ನೌಕರರ ಒಕ್ಕೂಟದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸಿದ್ದು, ಪ್ರಸ್ತುತ ರಾಜ್ಯ ಸಮಿತಿ ಸದಸ್ಯರಾಗಿದ್ದಾರೆ.
ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ೨೦೦೭ರಲ್ಲಿ ಡಾ. ಬಾಬು ಜಗಜೀವನ ರಾಮ್ ಶತಮಾನೋತ್ಸವ ಪ್ರಶಸ್ತಿ ಹಾಗು ೨೦೦೬ರಲ್ಲಿ ನವದೆಹಲಿ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ಡಾ. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ ನೀಡಲಾಗಿದೆ. ಇದೀಗ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಲಾಗಿದೆ. ಪಡೆದಿರುವ ಭದ್ರಾವತಿಯ ನಿವೃತ್ತ ಪ್ರಾಚಾರ್ಯರು ಹಾಗೂ ಸಿದ್ಧಾರ್ಥ ಅಂಧರ ಕೇಂದ್ರದ ಅಧ್ಯಕ್ಷರಾದ ಶ್ರೀ ಶಿವಬಸಪ್ಪ ಅವರನ್ನು ಶಿವಮೊಗ್ಗ ಜಿಲ್ಲಾ ಆಡಳಿತದ
ಶಾಲಾ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್ ಹೇಮಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್ ಚಂದ್ರಭೂಪಾಲ, ಮೈಸೂರಿನ ದಾಸನೂರು ಕೋಸಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment