ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ಹಾಗೂ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಪ್ರಾಯೋಜಕತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಭದ್ರಾವತಿ ಹೊಸಮನೆ ತಮಿಳು ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ : ದೇಹಕ್ಕೆ ಅಂದ-ಚೆಂದ ಎಷ್ಟು ಮುಖ್ಯವೋ ಅದೇ ರೀತಿ ಆರೋಗ್ಯ ಸಹ ಬಹಳ ಮುಖ್ಯ ಎಂದು ಫಾದರ್ ಪಿಯೂಸ್ ಡಿಸೋಜ ಹೇಳಿದರು.
ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸರ್ವಿಸ್ ಸೊಸೈಟಿ ಹಾಗೂ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಪ್ರಾಯೋಜಕತ್ವದಲ್ಲಿ ಸ್ತ್ರೀ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಹೊಸಮನೆ ತಮಿಳು ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮನುಷ್ಯನ ಸಂತಸದ ೩ ಸೂತ್ರಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳುವುದು ಅತಿ ಮುಖ್ಯ. ಉತ್ತಮ ಆರೋಗ್ಯದಿಂದ ನೆಮ್ಮದಿ ಕಾಣಲು ಸಾಧ್ಯ. ಪ್ರತಿಯೊಬ್ಬರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಶಿಬಿರದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಲಾರೆನ್ಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗು ಆಸ್ಪತ್ರೆ ವೈದ್ಯ ಡಾ ಸುಬೋಧ್, ಸಂಯೋಜಕಿ ರೈನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಐರಿನ್ ಮತ್ತು ಮಮತ ಪ್ರಾರ್ಥಿಸಿ, ಸುನಂದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮರ್ಲಿನ್ ಸ್ವಾಗತಿಸಿ, ಅಂತೋಣಿ ಆರೋಗ್ಯ ಮೇರಿ ನಿರೂಪಿಸಿದರು ರೂಪ ಆರೋಗ್ಯ ಮೇರಿ ವಂದಿಸಿದರು. ಸುಮಾರು ೨೯೮ ಮಂದಿ ಶಿಬಿರದ ಸದುಪಯೋಗಪಡೆದುಕೊಂಡರು.
ಸಂಘದ ಸಂಯೋಜಕಿ ಪ್ರಮೀಳ, ಕಾರ್ಯಕರ್ತರಾದ ಪರಿಮಳ, ಪ್ರಮೀಳಾ, ಜ್ಯೋತಿ ವಾಸ್ ಸೇರಿದಂತೆ ಸ್ಥಳೀಯರು ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment