ಭದ್ರಾವತಿ ಹಳೇನಗರದ ಸರ್ಕಾರಿ ಸಂಚಿಯ ಹೊನ್ನಮ್ಮ ಪದವಿ ಪೂರ್ವ ಕಾಲೇಜು.
ಭದ್ರಾವತಿ: ಹಳೆನಗರದ ಸರ್ಕಾರಿ ಸಂಚಿಯ ಹೊನ್ನಮ್ಮ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೬೯ರಷ್ಟು ಫಲಿತಾಂಶ ಪಡೆದುಕೊಂಡಿದ್ದು, ಕಾಲೇಜಿನ ೫ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ(ಡಿಸ್ಟಿಂಕ್ಷನ್)ಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. .
ವಿಜ್ಞಾನ ವಿಭಾಗದ ತಹೀರಾ ಅಂಜುಮ್-೫೩೦ ಮತ್ತು ಮಾಯಾವತಿ-೫೨೨, ವಾಣಿಜ್ಯ ವಿಭಾಗದ ಡಿ. ಶೀಫಾ-೫೨೩ ಮತ್ತು ಎಂ. ಗಗನಶ್ರೀ-೫೨೧ ಹಾಗು ಕಲಾ ವಿಭಾಗದ ಪ್ರಿಯಾಂಕ-೫೧೦ ಅತಿಹೆಚ್ಚು ಅಂಕ ವಿದ್ಯಾರ್ಥಿನಿಯರಾಗಿದ್ದಾರೆ.
ಈ ಬಾರಿ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ೨೫೦ ವಿದ್ಯಾರ್ಥಿನಿಯರ ಪೈಕಿ ೧೦೪ ವಿದ್ಯಾರ್ಥಿನಿಯರು ಪ್ರಥಮ ಹಾಗೂ ೬೦ ವಿದ್ಯಾರ್ಥಿನಿಯರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಕಾಲೇಜಿಗೆ ಶೇ. ೬೯ ಫಲಿತಾಂಶ ಲಭಿಸಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ