ಭದ್ರಾವತಿ : ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೇ.೧ರಂದು ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ನಗರದ ಜನ್ನಾಪುರ ಇಎಸ್‌ಐ ಚಿಕಿತ್ಸಾಲಯ(ಬಂಟರ ಭವನ)ದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಮಿಕರ ದಿನಾಚರಣೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಸಾಬ್ ಎಚ್. ನಂದಿಹಳ್ಳಿಯವರು ಅಧ್ಯಕ್ಷತೆವಹಿಸಲಿದ್ದಾರೆ.
ನಿವೃತ್ತ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಎಚ್.ಆರ್ ವಿಜಯಮೂರ್ತಿ, ವಿಮಾ ವೈದ್ಯಾಧಿಕಾರಿ ಡಾ. ಈಶ್ವರಪ್ಪ, ನಗರದ ನಯನ ಕಣ್ಣಿನ ಆಸ್ಪತ್ರೆ ವೈದ್ಯ ಡಾ. ಕುಮಾರ್, ನಿವೃತ್ತ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮತ್ತು ಇಎಸ್‌ಐಸಿ ಸ್ಥಳೀಯ ಕಛೇರಿ ವ್ಯವಸ್ಥಾಪಕಿ ಮಂಜುಳಾ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಮಿಕ ದಿನಾಚರಣೆ ಅಂಗವಾಗಿ ನೂತನವಾಗಿ ರಚನೆಯಾಗಿರುವ ವಿಭಾಗದ ಸಂಘದ ಕಾರ್ಯಕರ್ತರ ಪದಗ್ರಹಣ ಹಾಗು ಇಎಸ್‌ಐ ಕಾರ್ಮಿಕರಿಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment