ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಶಿವಮೊಗ್ಗ ವಲಯದಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ಪ್ರಥಮ ಡಿವಿಷನ್ ಲೀಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಎಫ್‌ಸಿಸಿ ತಂಡ ಚಾಂಪಿಯನ್ನಾಗಿ ಹೊರಹೊಮ್ಮುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿ ಕೊಂಡಿದೆ.
ಭದ್ರಾವತಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಶಿವಮೊಗ್ಗ ವಲಯದಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ೨೦೨೪-೨೫ನೇ ಸಾಲಿನ ಪ್ರಥಮ ಡಿವಿಷನ್ ಲೀಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಎಫ್‌ಸಿಸಿ ತಂಡ ಚಾಂಪಿಯನ್ನಾಗಿ ಹೊರಹೊಮ್ಮುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿ ಕೊಂಡಿದೆ.
ಸ್ಥಳೀಯ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಶಿವಮೊಗ್ಗ ವಲಯದಿಂದ ಪಂದ್ಯಾವಳಿ ಆಯೋಜಿಸಿಕೊಂಡು ಬರಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ ತಂಡಗಳಲ್ಲಿ ಶಿವಮೊಗ್ಗ ಎಫ್‌ಸಿಸಿ ತಂಡ ಸಹ ಒಂದಾಗಿದ್ದು, ಸತತ ಎರಡನೇ ಬಾರಿಗೆ ಚಾಂಪಿಯನ್ನಾಗಿ ಹೊರಹೊಮ್ಮುವ ಮೂಲಕ ಗಮನ ಸೆಳೆದಿದೆ. ಪಂದ್ಯಾವಳಿಯಲ್ಲಿ ವಿವಿಧೆಡೆಗಳಿಂದ ಹಲವು ತಂಡಗಳು ಭಾಗವಹಿಸಿದ್ದವು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಶಿವಮೊಗ್ಗ ವಲಯದ ಮೇಲ್ವಿಚಾರಕರು, ತರಬೇತಿದಾರರು ಹಾಗು ಕ್ರಿಕೆಟ್ ಅಭಿಮಾನಿಗಳು ಎಫ್‌ಸಿಸಿ ತಂಡವನ್ನು ಅಭಿನಂದಿಸಿದ್ದಾರೆ.
No comments:
Post a Comment