ಭದ್ರಾವತಿಯಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ಹಾಗು ಸಂಯುಕ್ತ ಕ್ರೈಸ್ತ ಬಾಂಧವರಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಹಾಗೂ ನಿಧನ ಹೊಂದಿದ ಕ್ರೈಸ್ತ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರಿಗೆ ಸಂತಾಪ ಸೂಚಿಸಲಾಯಿತು.
ಭದ್ರಾವತಿ: ಅಖಿಲ ಭಾರತ ಕ್ರೈಸ್ತ ಮಹಾಸಭಾ ಹಾಗು ಸಂಯುಕ್ತ ಕ್ರೈಸ್ತ ಬಾಂಧವರಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಹಾಗೂ ನಿಧನ ಹೊಂದಿದ ಕ್ರೈಸ್ತ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರಿಗೆ ಸಂತಾಪ ಸೂಚಿಸಲಾಯಿತು.
ನಗರದ ಅಂಡರ್ ಬ್ರಿಡ್ಜ್, ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಕ್ರೈಸ್ತ ಬಾಂಧವರು ಮೇಣದ ಬತ್ತಿ ಹಚ್ಚಿ ಉಗ್ರರ ಕೃತ್ಯ ಖಂಡಿಸಿ ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಹಾಗೂ ನಿಧನ ಹೊಂದಿದ ಕ್ರೈಸ್ತ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರಿಗೆ ಸಂತಾಪ ಸೂಚಿಸುವ ಮೂಲಕ ತಕ್ಷಣ ಸರ್ಕಾರ ಉಗ್ರರರನ್ನು ಪತ್ತೆ ಮಾಡಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಸಿದರು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸುವ ನಿಟ್ಟಿನಲ್ಲಿ ಗಡಿಯಲ್ಲಿ ಹೆಚ್ಚಿನ ಭದ್ರತೆ ಅಳವಡಿಸುಂತೆ ಆಗ್ರಹಿಸಿದರು.
ಸಂಯುಕ್ತ ಕ್ರೈಸ್ತ ಸಂಘದ ಅಧ್ಯಕ್ಷ ಸೆಲ್ವರಾಜ್, ಅಖಿಲ ಭಾರತ ಕ್ರೈಸ್ತ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ನಾಯ್ಕ, ರೈಮಂಡ್, ಜೋಸೆಫ್, ಸ್ಟೀಫನ್ ಕ್ರಿಸ್ಪೋಫರ್ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾತನಾಡಿದರು.
No comments:
Post a Comment