ಭದ್ರಾವತಿ ನ್ಯೂ ಕಾಲೋನಿ (ಹುಡ್‌ಯಾರ್ಡ್ ಶೆಡ್) ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ನೂತನ ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಪಾಲ್ಗೊಂಡು ಭಕ್ತರಿಗೆ ಆಶೀರ್ವಚನ ನೀಡಿದರು.
ಭದ್ರಾವತಿ : ವೈದಿಕರ ನೆರವಿನೊಂದಿಗೆ ಧಾರ್ಮಿಕ ಆಚರಣೆಗಳ ಮೂಲಕ ಭಕ್ತರು ತಮ್ಮ ಇಸ್ಟಾರ್ಥಗಳನ್ನು ದೇವರ ಬಳಿ ಪ್ರಾರ್ಥಿಸಲು ದೇವಾಲಯಗಳು ಸಹಕಾರಿಯಾಗಿವೆ. ಈ ಹಿನ್ನಲೆಯಲ್ಲಿ ದೇವಸ್ಥಾನಗಳಿಗೆ ಮಹತ್ವದ ಸ್ಥಾನಮಾನಗಳಿವೆ ಎಂದು ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು.
ಶ್ರೀಗಳು ಮಂಗಳವಾರ ನಗರದ ನ್ಯೂ ಕಾಲೋನಿ (ಹುಡ್‌ಯಾರ್ಡ್ ಶೆಡ್) ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ನೂತನ ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತರಿಗೆ ಆಶೀರ್ವಚನ ನೀಡಿದರು.
ದೇವಸ್ಥಾನಗಳು ಪುಣ್ಯದ ಸ್ಥಳ, ದೇವರ ಆರಾಧನೆಯ ಸ್ಥಳ. ಇದನ್ನು ನಾವುಗಳು ಅರಿತು ಪುಣ್ಯದ ಕಾರ್ಯಗಳಲ್ಲಿ ಕೈಜೋಡಿಸಬೇಕು. ಇಂತಹ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ನಡೆಯಬೇಕು ಎಂದರು.
ಭದ್ರಾವತಿ ನ್ಯೂ ಕಾಲೋನಿ (ಹುಡ್‌ಯಾರ್ಡ್ ಶೆಡ್) ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ನೂತನ ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಮುರುಗೇಶ್ ಸ್ವಾಮೀಜಿ ಉಪಸ್ಥಿತರಿದ್ದು, ಭಕ್ತರಿಗೆ ಆಶೀರ್ವದಿಸಿದರು. ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ದೇವಸ್ಥಾನ ಸೇವಾ ಸಮಿತಿ ಪದಾಧಿಕಾರಿಗಳು, ದಾನಿಗಳು, ಚುನಾಯಿತ ಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.
ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಅಂಗವಾಗಿ ಬೆಳಿಗ್ಗೆ ದೇವರಿಗೆ ಕಲಾತತ್ವ ಹೋಮ, ಅಭಿಷೇಕ, ಮಹಾಮಂಗಳಾರತಿ, ಶಿಖರ ಪ್ರತಿಷ್ಠೆ, ಅಧಿವಾಸ ಹೋಮ, ನವಕಲಶ ಸ್ಥಾಪನೆ ಕಾರ್ಯಕ್ರಮಗಳು ಜರುಗಿದವು.
ಸೇವಾಕರ್ತರು, ಸುರಗೀತೋಪು, ಜೆಪಿಎಸ್ ಕಾಲೋನಿ, ನ್ಯೂ ಕಾಲೋನಿ, ನ್ಯೂಟೌನ್, ಜನ್ನಾಪುರ, ಕಾಗದನಗರ, ಬಾಲಭಾರತಿ, ಬೆಣ್ಣೆಕೃಷ್ಣ ಸರ್ಕಲ್, ಆಂಜನೇಯ ಅಗ್ರಹಾರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಪಾಲ್ಗೊಂಡಿದ್ದರು.
No comments:
Post a Comment