ವಾಣಿಶ್ರೀ ನಾಗರಾಜ್
ಭದ್ರಾವತಿ : ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್‌ರವರ ನಿರ್ದೇಶನದ ಮೇರೆಗೆ ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಹಳೇನಗರ ಕೋಟೆ ಏರಿಯಾ ನಿವಾಸಿ ವಾಣಿಶ್ರೀ ನಾಗರಾಜ್‌ರವರನ್ನು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಾಗ್ದೇವಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇವರು ತಾಲೂಕು ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ನಿರ್ದೇಶಕಿಯಾಗಿ, ಪತಂಜಲಿ ಯೋಗ ಸಮಿತಿ ಶಿಕ್ಷಕಿಯಾಗಿ ಹಾಗು ರಾಜ್ಯಮಟ್ಟದ ಯೋಗ ತೀರ್ಪುಗಾರರಾಗಿ, ಹಳೇನಗರ ಮಹಿಳಾ ಸೇವಾ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಾಣಿಶ್ರೀಯವರು ತಮ್ಮನ್ನು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಳಿಸಿರುವ ಹಿನ್ನಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಸಮಿತಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
No comments:
Post a Comment