ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ನರಸಿಂಹ ಜಯಂತಿ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ : ಹಳೇನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ನರಸಿಂಹ ಜಯಂತಿ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ೬ ಗಂಟೆಗೆ ನಿರ್ಮಾಲ್ಯ ೮ ಗಂಟೆಗೆ ಪಂಚಾಮೃತ ಅಭಿಷೇಕ ಹಾಗೂ ದೇವಸ್ಥಾನದಿಂದ ಉತ್ಸವ ಮೂರ್ತಿ ಮೆರವಣಿಗೆ ಆರಂಭಗೊಂಡು ಬ್ರಾಹ್ಮಣರ ಬೀದಿ, ರಥ ಬೀದಿ ರಸ್ತೆ, ತರಿಕೆರೆ ರಸ್ತೆ, ಹಾಗು ಎನ್.ಎಸ್.ಟಿ ರಸ್ತೆ ಮೂಲಕ ಪುನಃ ದೇವಸ್ಥಾನಕ್ಕೆ ಹಿಂದಿರುಗಿತು.
ವೇದಘೋಷ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ರಾತ್ರಿ ೮ ಗಂಟೆಗೆ ಕಲ್ಯಾಣೋತ್ಸವ ನಡೆಯಿತು. ಮೇ.೧೨ರಂದು ಮಧ್ಯಾಹ್ನ ೧೨ ಗಂಟೆಗೆ ಸ್ವಾಮಿಯ ರಥೋತ್ಸವ ಜರುಗಲಿದೆ.
ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥ ಶರ್ಮ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಸಹಾಯಕ ಅರ್ಚಕ ಶ್ರೀನಿವಾಸ್ ಜಿಲ್ಲಾ ಧಾರ್ಮಿಕ ಪರಿಷತ್ ನಿರ್ದೇಶಕ ಜಿ. ರಾಮಕಾಂತ್ ಹಾಗೂ ಎಸ್ ನರಸಿಂಹಾಚಾರ್, ರವಿ ಮಾಸ್ಟರ್, ಸುದರ್ಶನ್, ಸುಧೀಂದ್ರ, ಶ್ರೀಧರ್, ಅಡುಗೆ ರಂಗಣ್ಣ ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
No comments:
Post a Comment